ಬೆಂಗಳೂರು: ರಾಜ್ಯದಲ್ಲಿ ವಿಧಿ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ, ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು, ಗೃಹ ಸಚಿವ ಆರಗ ಜ್ಞಾನೇಂದ್ರ ನಾಳೆ ಜ. 10 ರಂದು ಗುಜರಾತ್ ರಾಜ್ಯಕ್ಕೆ ಮೂರು ದಿನಗಳ ಭೇಟಿ ನೀಡಲಿದ್ದಾರೆ.
ಗುಜರಾತ್ ನ ಅಹಮದಾಬಾದ್ ನಗರಕ್ಕೆ ಭೇಟಿ ನೀಡಲಿರುವ ಗೃಹ ಸಚಿವ, ಅಲ್ಲಿನ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಇತರೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ತಮ್ಮ ಮೂರು ದಿನಗಳ ಭೇಟಿಯಲ್ಲಿ ಸಚಿವರು ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಕುರಿತು, ಎಂ ಓ ಯು ಗೆ ಸಹಿ ಹಾಕುವ ಸಾಧ್ಯತೆ ಇದೆ.
ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಥಮ ಎನ್ನಾಲದ, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ, ಕರ್ನಾಟಕದಲ್ಲಿ ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.
ನಾಳೆಯಿಂದ ಮೂರು ದಿನಗಳ ತಮ್ಮ ಭೇಟಿಯ ಕಾಲದಲ್ಲಿ, ಸಚಿವರು, ಗುಜರಾತ್ ಮುಖ್ಯಮಂತ್ರಿ ಭೂಪೆಂದ್ರ ಭಾಯ್ ಪಾಟೀಲ್ ಅವರನ್ನೂ, ಸೌಜನ್ಯ ಭೇಟಿ ಮಾಡಲಿದ್ದು, ಗುರುವಾರ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.