Advertisement
ವಿಜಯವಾಡದ ಲೆಮನ್ ಟ್ರೀ ಹೊಟೆಲ್ ನಲ್ಲಿ ಶುಕ್ರವಾರ (ಸೆ 27 ) ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಪರಿಸರ, ಅರಣ್ಯ ಮತ್ತು ವನ್ಯಜೀವಿ ನಿರ್ವಹಣೆಯಲ್ಲಿ ಹಲವು ಪ್ರಮುಖ ಸವಾಲುಗಳಿದ್ದು, ಇವುಗಳನ್ನು ಎದುರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಅರಣ್ಯ ಇಲಾಖೆಗಳು ಒಗ್ಗೂಡಿವೆ ಎಂದು ತಿಳಿಸಿದರು. ಇಂದು ಹಲವು ತಿಳಿವಳಿಕೆ ಮಹತ್ವದ ಒಪ್ಪಂದಗಳಿಗೆ ಪವನ್ ಕಲ್ಯಾಣ್ ಮತ್ತು ತಮ್ಮ ಸಮ್ಮುಖದಲ್ಲಿ ಸಹಿ ಹಾಕಲಾಗುತ್ತಿದ್ದು, ಇದರಲ್ಲಿ ವನ್ಯಜೀವಿಗಳನ್ನು ರಕ್ಷಿಸಲು, ನಮ್ಮ ಕಾಡುಗಳನ್ನು ಸಂರಕ್ಷಿಸಲು ಮತ್ತು ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನ ಸಮುದಾಯಗಳು ಎದುರಿಸುತ್ತಿರುವ ಸಂಕೀರ್ಣ ಸವಾಲುಗಳನ್ನು ತಗ್ಗಿಸಲು ಸಾಮೂಹಿಕ ಪ್ರಯತ್ನ ಮಾಡುವ ಸಂಕಲ್ಪವೂ ಸೇರಿದೆ ಎಂದರು.
Related Articles
Advertisement
ನಮ್ಮ ಎರಡೂ ರಾಜ್ಯಗಳ ನಡುವಿನ ಪಾಲುದಾರಿಕೆಯ ಮೂಲಕ, ಕರ್ನಾಟಕವು ಆಂಧ್ರಪ್ರದೇಶದೊಂದಿಗೆ ಸಹಕರಿಸಿ ಪರಿಸರ ಪ್ರವಾಸೋದ್ಯಮ ಉಪಕ್ರಮಗಳನ್ನು ಬಲಪಡಿಸುತ್ತದೆ, ಇದು ಜನರಿಗೆ ಪ್ರಯೋಜನವನ್ನು ನೀಡುವುದಲ್ಲದೆ ವನ್ಯಜೀವಿ ಸಂರಕ್ಷಣೆಯ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ಈ ಸಹಯೋಗವು ಇತರ ರಾಜ್ಯಗಳಿಗೆ ಮಾದರಿಯಾಗಲಿದೆ. ನೆರೆ ಹೊರೆ ರಾಜ್ಯಗಳ ನಡುವೆ ಸೌಹಾರ್ದತೆ, ಸಹಕಾರ, ಸಹಯೋಗ ಇದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಮತ್ತು ಸುಗಮವಾಗಿ ಪರಿಹರಿಸಬಹುದು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.