Advertisement

ಅರಣ್ಯ ಪ್ರದೇಶದಲ್ಲಿ ವಾಸಿಸುವವರಿಗೆ ಹಕ್ಕು ಪತ್ರ ನೀಡಿ

03:30 PM Sep 18, 2022 | Team Udayavani |

ರಬಕವಿ-ಬನಹಟ್ಟಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಇದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಗ್ರಾಮದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವುದಾಗಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ತಹಶೀಲ್ದಾರ್‌ ಎಸ್‌.ಬಿ. ಇಂಗಳೆ ತಿಳಿಸಿದರು.

Advertisement

ಶನಿವಾರ ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೇಖರ ನೀಲಕಂಠ ಮತ್ತು ಬಿರಾದಾರ ಪಾಟೀಲ ಮಾತನಾಡಿ, ಸ್ಥಳೀಯ ಸರ್ವೇ ನಂ. 35ರ ಅರಣ್ಯ ಭೂ ಪ್ರದೇಶದಲ್ಲಿ ಜನರು ನಾಲ್ಕೈದು ದಶಕಗಳಿಂದ ವಾಸ ಮಾಡುತ್ತಿದ್ದಾರೆ. ಇವರಿಗೆ ಇಲಾಖೆಯಿಂದ ತೊಂದರೆಯಾಗುತ್ತಿದೆ. ಆದ್ದರಿಂದ ಕಾಯಃ ವಾಸ ಮಾಡಲು ಹಕ್ಕು ಪತ್ರ ನೀಡಬೇಕು. ಅದೇ ರೀತಿಯಾಗಿ ಜಿಎಲ್ಬಿಸಿ ಕಾಲುವೆಯ ಭೂ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಮಾರುತಿ ಸೋರಗಾವಿ ಮಾತನಾಡಿ, ಜಗದಾಳ ಗ್ರಾಮಕ್ಕೆ ಮೂಲ ಸೌಕರ್ಯ ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಭದ್ರತಾ ಯೋಜನೆ ಅಡಿಯಲ್ಲಿ ಮಾಸಾಶನದ ಆದೇಶ ಪ್ರತಿಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಪಂ ಇಒ ಸಂಜೀವ ಹಿಪ್ಪರಗಿ, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಕುರಿತು ಮಾಹಿತಿ ನೀಡಿದರು. ಗ್ರಾಪಂ ಅಧ್ಯಕ್ಷ ಗುರುಲಿಂಗಪ್ಪ ಚಿಂಚಲಿ ಅಧ್ಯಕ್ಷತೆ ವಹಿಸಿದ್ದರು.

Advertisement

ಶಂಕರ ಗೊಬ್ಬಣಿ, ಗ್ರೇಡ್‌ -2 ತಹಶೀಲ್ದಾರ್‌ ಎಸ್‌.ಬಿ. ಕಾಂಬಳೆ, ಎಇಇ ಚೇತನ ಅಬ್ಬಿಗೇರಿ, ಪರಶುರಾಮ ಬಸವ್ವಗೋಳ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಸೇರಿದಂತೆ ಜಗದಾಳ ಗ್ರಾಪಂ ಸದಸ್ಯರು ಇದ್ದರು. ಎಂ.ಬಿ. ಮಾಳೆದ ಸ್ವಾಗತಿಸಿದರು. ಆರ್‌.ವೈ. ಗುದಗೇನವರ ವಂದಿಸಿದರು. ಎಂ.ಎಲ್‌. ಹಾನಪುರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರವಿ ಹುಕ್ಕೇರಿ, ಬಿ.ಆರ್‌. ಬಿರಾದಾರ ಪಾಟೀಲ, ಸದಾಶಿವ ದಡ್ಡಿಮನಿ, ಸದಾಶಿವ ದಡ್ಡಿಮನಿ, ಪ್ರಕಾಶ ವಂದಾಲ ಸೇರಿದಂತೆ ಜಗದಾಳ ಗ್ರಾಮದ ಜನರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next