Advertisement
ಅರಣ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರದ ಅರಣ್ಯ ಭವನದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ಅವರು ಪ್ರಕೃತಿ ವಿಕೋಪದಿಂದಾಗಿ ರಸ್ತೆ ಹಾಗೂ ಸೇತುವೆ ಬಳಿ ಬಿದ್ದಿರುವ ಮರಗಳನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗುವುದು. ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
Related Articles
Advertisement
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಾರಾಯಣ ಸ್ವಾಮಿ ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ನಾಗರಹೊಳೆಯ ಗಿರಿಜನ ಹಾಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಮನೆ ನಿರ್ಮಾಣ, ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭಾಕರನ್, ಶಿಂಧೆ, ಕಾರ್ಯಪ್ಪ, ಶಿವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸೀಮಾ, ದಯಾನಂದ, ರೋಷನ್, ಆಂಥೋನಿ, ಸೆಸ್ಕ್ ಇಇ ಸೋಮಶೇಖರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸುರೇಶ್, ಶಿವರಾಮು, ವೇಣುಗೋಪಾಲ್, ತಾ.ಪಂ.ಇಒಗಳಾದ ಲಕ್ಷಿ¾, ಸುನಿಲ್ ಕುಮಾರ್, ತಾಲ್ಲೂಕು ಸಮಾಜ ಕಲ್ಯಾಣಾದಿಕಾರಿ ಶೇಖರ್ ಇತರರು ಉಪಸ್ಥಿತರಿದ್ದರು.
ಆರ್‌ಟಿಸಿ ನೀಡಬೇಕಿದೆಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಅರಣ್ಯ ಹಕ್ಕುಪತ್ರ ನೀಡಿರುವುದಕ್ಕೆ ಆರ್‌ಟಿಸಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳಲಾಗುವುದು. ನಾಗರಹೊಳೆ ವ್ಯಾಪ್ತಿಯ ಸಮಸ್ಯೆಗಳಿರುವ ಹಾಡಿ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದ್ದು, ಯಾವುದೇ ರೀತಿ ತೊಂದರೆ ನೀಡಬಾರದು ಎಂದು ತಿಳಿಸಿದರು. ಮೂರು ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದವರು ಹೇಳಿದರು. ಜಿಲ್ಲೆಯಲ್ಲಿ ಅರಣ್ಯ ಹಕ್ಕುಪತ್ರ ನೀಡಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.