Advertisement
ಇಲಾಖೆಯ 13 ವೃತ್ತಗಳ ಅಧಿಕಾರಿಗಳ ಜೇಷ್ಠತಾ ಪಟ್ಟಿ ತಯಾರಿಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸದೆ ಉಪ ವಲಯ ಅರಣ್ಯಾಧಿಕಾರಿಗಳಿಗೆ ಭಡ್ತಿ ನೀಡಲು ಹಿರಿಯ ಅಧಿಕಾರಿಗಳು ಮುಂದಾಗಿರುವುದನ್ನು ತಡೆದು, ಕಾನೂನು ಇಲಾಖೆ ಹಾಗೂ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಭಿಪ್ರಾಯ ಪಡೆದು ಜೇಷ್ಠತಾ ಪಟ್ಟಿ ಸಿದ್ಧಪಡಿಸುವಂತೆ ಸಚಿವರು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Related Articles
Advertisement
ಪರಿಷ್ಕರಿಸುವ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಜಯ್ ಮಿಶ್ರಾ ನೇತೃತ್ವದಲ್ಲಿ ರಚಿಸಿದ್ದ ಸಮಿತಿ ನೀಡಿದ್ದ ವರದಿ ಆಧರಿಸಿ ಪಟ್ಟಿ ಪ್ರಕಟಿಸಲು ಸೂಚಿಸಿದ್ದರು. ಈ ಸಂಬಂಧ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಲು ಸೂಚಿಸಿದ್ದರೂ, ಅಧಿಕಾರಿಗಳು ಪಾಲಿಸಿಲ್ಲ ಎನ್ನಲಾಗಿದೆ.
ಅನರ್ಹರಿಗೆ ಅವಕಾಶದ ಆರೋಪ :
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಮತ್ತು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಂಗರಾವ್ ಜಿ.ವಿ. ಅವರು ಗೊಂದಲ ಇರುವ ಐದು ವೃತ್ತಗಳಿಗೆ ಸಂಬಂಧಿಸಿ ಅನರ್ಹ ಉಪ ವಲಯ ಅರಣ್ಯ ಅಧಿಕಾರಿಗಳಿಗೆ ಭಡ್ತಿ ನೀಡುವ ಪ್ರಸ್ತಾವನೆಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗುತ್ತಿದೆ. ನಿವೃತ್ತಿ ಅಂಚಿನಲ್ಲಿರುವ ಕೆಲವು ಅಧಿಕಾರಿಗಳು ಸೇವಾವಧಿಯ ಲಾಭ ಪಡೆಯಲು ಈ ಪ್ರಯತ್ನಕೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಈಗಾಗಲೇ ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತಕ್ಕೆ ಸಂಬಂಧಿಸಿ ಮುಂಭಡ್ತಿ ಪ್ರಕ್ರಿಯೆ ನಡೆಸದಂತೆ ಕೆಎಟಿ ತಡೆಯಾಜ್ಞೆ ನೀಡಿದೆ.
ಮುಂಭಡ್ತಿ ಪ್ರಕ್ರಿಯೆ ಆಂತರಿಕ ವಿಚಾರ. ಕಾನೂನಿನ ಪ್ರಕಾರ ಇದನ್ನು ಮಾಡಲಾಗುವುದು. ಈ ಬಗ್ಗೆ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಲಾಗಿದೆ. – ಆನಂದ್ ಸಿಂಗ್, ಅರಣ್ಯ ಸಚಿವ.