Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವೇರಿಸೇನೆಯ ಸಂಚಾಲಕ ಕೆ.ಎ.ರವಿಚಂಗಪ್ಪ ಅವರು, ಸಮಾಜಕ್ಕೆ ಮಾದರಿಯಾಗಬೇಕಾಗಿದ್ದ ಪ್ರಭಾವಿ ರಾಜಕಾರಣಿಯೊಬ್ಬರು ನಗರಸಭೆ ಹಾಗೂ ಮೂಡಾದ ಅನುಮತಿ ಇಲ್ಲದೆ ಅರಣ್ಯ ಪ್ರದೇಶಕ್ಕೆ ಸೇರಿದ ಜಾಗದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಮಡಿಕೇರಿ ಅರಣ್ಯ ಭವನದ ಬಳಿ ಪ್ರತೀವರ್ಷ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಅರಣ್ಯ ನಾಶವೇ ಕಾರಣವಾಗಿದೆ. ಮಡಿಕೇರಿ ಪಟ್ಟಣದ ಒತ್ತಿನಲ್ಲಿರುವ ಕರ್ಣಂಗೇರಿ ಗ್ರಾಮದ ಸ.ನಂ.289/1ರಲ್ಲಿ 54 ಎಕರೆ ಅರಣ್ಯ ಜಾಗವಿದ್ದು, ಇದನ್ನು ಮಡಿಕೇರಿ ಪೂರ್ವ ಅರಣ್ಯವೆಂದು ಕರೆಯಲಾಗುತ್ತಿದೆ. ಪ್ರಾಣಿಗಳು ಓಡಾಡಬೇಕಾಗಿರುವ ಈ ಅರಣ್ಯ ಜಾಗವನ್ನು ಸುಮಾರು 68 ಮಂದಿ ಒತ್ತುವರಿ ಮಾಡಿಕೊಂಡಿರುವುದಾಗಿ ಅರಣ್ಯ ಇಲಾಖೆಯ ದಾಖಲೆಗಳೇ ಹೇಳುತ್ತಿವೆ. ಒತ್ತುವರಿಯಾಗಿರುವ ಜಾಗದಲ್ಲಿ ಮನೆಗಳನ್ನು ನಿರ್ಮಿಸಲಾಗಿದ್ದರೂ, ಅರಣ್ಯ ಇಲಾಖೆ ಈ ಪ್ರಕರಣವನ್ನು ಕಂಡೂ ಕಾಣದಂತೆ ಮೌನಕ್ಕೆ ಶರಣಾಗಿದೆ ಎಂದು ರವಿಚಂಗಪ್ಪ ಆರೋಪಿಸಿದರು.
Advertisement
ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣ : ಕಾವೇರಿಸೇನೆ ಆರೋಪ
07:40 AM Apr 26, 2018 | |
Advertisement
Udayavani is now on Telegram. Click here to join our channel and stay updated with the latest news.