Advertisement

ಅರಣ್ಯ ಇಲಾಖೆ ಖಾಲಿ ಹುದ್ದೆ: ಬುಡಕಟ್ಟು, ಅರಣ್ಯವಾಸಿಗಳ ನೇಮಕಕ್ಕೆ ಪರಿಶೀಲನೆ: ಖಂಡ್ರೆ

08:50 PM Jul 10, 2023 | Team Udayavani |

ವಿಧಾನ ಪರಿಷತ್ತು: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಬುಡಕಟ್ಟು ಜನಾಂಗ ಮತ್ತು ಪಾರಂಪರಿಕ ಅರಣ್ಯ ವಾಸಿಗಳನ್ನೂ ಪರಿಗಣಿಸುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

Advertisement

ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಶಾಂತಾರಾಮ್‌ ಬುಡ್ನ ಸಿದ್ದಿ ಮನವಿ ಸ್ಪಂದಿಸಿದ ಸಚಿವರು, ಅರಣ್ಯ ರಕ್ಷಣೆ ವಿಚಾರದಲ್ಲಿ ಬುಡಕಟ್ಟು ಜನಾಂಗ ಮತ್ತು ಪಾರಂಪರಿಕ ಅರಣ್ಯ ವಾಸಿಗಳಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 1.22 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಿದ್ದು, ಇದುವರೆಗೆ 54 ಲಕ್ಷ ಗಿಡಗಳನ್ನು ನೆಡಲಾಗಿದೆ. ಈ ಪೈಕಿ ಎಲ್ಲ ಗಿಡಗಳೂ ಉತ್ತಮ ಸ್ಥಿತಿಯಲ್ಲಿವೆ. ಅಲ್ಲದೆ, ಜಿಲ್ಲಾ ವ್ಯಾಪ್ತಿಯ ಸಿದ್ದಿ ಬುಡಕಟ್ಟು ಜನಾಂಗದವರೊಂದಿಗೆ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಗಿಡಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಂತಾರಾಮ್‌ ಸಿದ್ದಿ, ಕೇವಲ ಸಿದ್ದಿ ಅಲ್ಲ; ಆ ಭಾಗದಲ್ಲಿ ಹಾಲಕ್ಕಿ, ಕುಣಬಿ ಮತ್ತಿತರ ಜನಾಂಗಗಳೂ ಇವೆ. ಅವರ ಅನುಭವವನ್ನೂ ಅರಣ್ಯ ರಕ್ಷಣೆಗೆ ಬಳಸಿಕೊಳ್ಳಬೇಕು. ಅರಣ್ಯ ಇಲಾಖೆಯಲ್ಲಿ ಉದ್ಯೋಗವನ್ನೂ ಈ ಜನಾಂಗಗಳಿಗೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next