Advertisement

Forest encroachment: ಸಣ್ಣ ಒತ್ತುವರಿದಾರರಿಗೆ ತೊಂದರೆ ಕೊಡೆ, ದೊಡ್ಡವರ ಬಿಡೆ: ಸಿಎಂ s

01:21 AM Sep 05, 2024 | Team Udayavani |

ಬೆಂಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯ ಕೈಗೊಳ್ಳದಂತೆ ಪಟ್ಟ ಭದ್ರರು ಒತ್ತಡ ಹೇರುವುದು ಸೇರಿ ಹಲವು ಕುತಂತ್ರ ಮಾಡುತ್ತಿದ್ದಾರೆ. ಆದರೆ ಸಣ್ಣ ಒತ್ತುವರಿದಾರರಿಗೆ ತೊಂದರೆ ಕೊಡುವುದಿಲ್ಲ; ದೊಡ್ಡ ಒತ್ತುವರಿದಾರರನ್ನು ಬಿಡುವು
ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಸಿಬಂದಿಗೆ 2022 ಮತ್ತು 2023ನೇ ಸಾಲಿನ “ಮುಖ್ಯಮಂತ್ರಿ ಪದಕ’ ಪ್ರದಾನ ಮತ್ತು 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಆದೇಶ ಪತ್ರ ಪ್ರದಾನ ಮಾಡಿ ಮಾತನಾಡಿದ ಅವರು, ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ಆವಶ್ಯಕ. ಮುಂಬರುವ ದಿನಗಳಲ್ಲಿ ಒತ್ತುವರಿಯೇ ಆಗದಂತೆ ನೋಡಿಕೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪಟ್ಟಭದ್ರರಿಂದ ಕುತಂತ್ರ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಜಾಗತಿಕ ಹವಾಮಾನ ಬದಲಾವಣೆಯ ಅವಾಂತರಗಳು ಹೆಚ್ಚಾಗಿರುವುದನ್ನು ಕಾಣಬಹುದು. ನೆರೆಯ ವಯನಾಡಿನಲ್ಲಿ ಎರಡು ಹಳ್ಳಿಗಳೇ ನಾಶವಾದವು. ಶಿರೂರಿನಲ್ಲಿ 11 ಜನ ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಪರಿಸರ ಸಮತೋಲನ ಮತ್ತು ಸಂರಕ್ಷಣೆ ನಮ್ಮ ಆದ್ಯಕರ್ತವ್ಯ ಆಗಬೇಕು. ಇದಕ್ಕಾಗಿ ದೊಡ್ಡ ಪ್ರಮಾಣದ ಅರಣ್ಯ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next