Advertisement
ಘಾಟಿ ಪರಿಸರದಲ್ಲಿ ಧೂಮಪಾನ, ಅಡುಗೆ ಅಥವಾ ಶಿಕಾರಿ ಮಾಡುವವರಿಂದ ಬೆಂಕಿ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.
Related Articles
ದಿಂದ ಕಾಳ್ಗಿಚ್ಚು ಉಂಟಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇಲಾಖೆ ವತಿಯಿಂದ ಈ ಸ್ಥಳಗಳಲ್ಲಿ ಬೆಂಕಿ ರೇಖೆ ನಿರ್ಮಾಣ ಕಾರ್ಯ ನಡೆಯುತ್ತಿಲ್ಲ ಹಾಗೂ ಇದು ಬೆಳ್ತಂಗಡಿ ಕಡೆಯ ವನ್ಯಜೀವಿ ವಿಭಾಗದ ಅರಣ್ಯ ವ್ಯಾಪ್ತಿಯಿಂದ ಹಬ್ಬಿರುವ ಸಾಧ್ಯತೆ ಇದೆ ಎಂದು ಚಿಕ್ಕಮಗಳೂರು ವಿಭಾಗದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
Advertisement
ಚಾರ್ಮಾಡಿ ಘಾಟಿಯ ರಸ್ತೆ ಹಾಗೂ ಅರಣ್ಯ ಪ್ರದೇಶ ದ.ಕ. ಹಾಗೂ ಚಿಕ್ಕಮಗಳೂರು ಜಿಲ್ಲೆ ಗಳ ವ್ಯಾಪ್ತಿಯಲ್ಲಿದೆ. ಈ ಬಾರಿಯ ಕಾಳ್ಗಿಚ್ಚಿನಿಂದ ಚಿಕ್ಕಮಗಳೂರು ವಿಭಾಗದ ಅರಣ್ಯದಲ್ಲಿರುವ ಅಪಾರ ಪ್ರಮಾಣದ ಸಸ್ಯ ಸಂಕುಲ ನಾಶವಾಗಿರುವ ಸಾಧ್ಯತೆ ಇದೆ.
ಚಾರ್ಮಾಡಿ ಘಾಟಿ ಪರಿಸರದಲ್ಲಿ ಉಂಟಾಗಿರುವ ಕಾಳ್ಗಿಚ್ಚನ್ನು ಹತೋಟಿಗೆ ತರಲಾಗಿದೆ. ಸ್ಥಳೀಯರು ಹಾಗೂ ಇಲಾಖೆ ಸಿಬಂದಿ ತತ್‌ಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನಹಾನಿ ತಪ್ಪಿದೆ.
– ಕ್ರಾಂತಿ, ಡಿಎಫ್ಒ, ಚಿಕ್ಕಮಗಳೂರು ವಿಭಾಗ ಬೆಳ್ತಂಗಡಿ ವನ್ಯಜೀವಿ ವಿಭಾಗದ ಅರಣ್ಯದಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಇಲ್ಲ. ಚಾರ್ಮಾಡಿ ಘಾಟಿ ಭಾಗದಲ್ಲಿ ಕಾಳ್ಗಿಚ್ಚು ಉಂಟಾಗದಂತೆ ಮುಂಜಾಗ್ರತ ಕ್ರಮವಾಗಿ ಮುಂದಿನ ಕೆಲವೇ ದಿನಗಳಲ್ಲಿ ಬೆಂಕಿ ರೇಖೆಯ ನಿರ್ಮಾಣ ಕೆಲಸ ಆರಂಭಿಸಲಾಗುತ್ತದೆ.
– ಸ್ವಾತಿ, ಆರ್‌ಎಫ್ಒ, ವನ್ಯಜೀವಿ ವಿಭಾಗ, ಬೆಳ್ತಂಗಡಿ