Advertisement
8 ವರ್ಷದಿಂದ ಹೋರಾಟ: ಈ ವಿಚಾರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಗ್ರಾಮ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಕೃಷ್ಣ ಮೂರ್ತಿ 2006ರ ಅರಣ್ಯ ಹಕ್ಕು ಕಾಯ್ದೆ ಪ್ರಕಾರ, ಸುಮಾರು 8 ವರ್ಷಗಳಿಂದ ಅರಣ್ಯ ಭೂಮಿಯ ಹಕ್ಕು ಪತ್ರಕ್ಕಾಗಿ ಹೋರಾಟನಡೆಸುತ್ತಿದ್ದರು. ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
Related Articles
Advertisement
ಇದನ್ನೂ ಓದಿ:- ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳಲಾಗುವುದು : ಸಿಎಂ ಯೋಗಿ ಆದಿತ್ಯನಾಥ್
ವಾದ-ವಿವಾದ ಜಟಿಲ: ಭೂಮಿ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಕುಟುಂಬಗಳು, ತಾವು ಅರಣ್ಯದಲ್ಲಿ ವಾಸ ಮಾಡುತ್ತಿದ್ದ ಸ್ಥಳ, ಅಲ್ಲಿನ ಬದುಕು, ಒರಳುಕಲ್ಲು, ಪೂಜಾ ಸ್ಥಳ ಮುಂತಾದ ಸಾಕ್ಷ್ಯಗಳನ್ನು ನೀಡಿದೆ. 1993-94ರಲ್ಲಿ ರಾಮನಗರ ತಹಶೀಲ್ದಾರ್ ಕಚೇರಿಯ ಹಿಂಬರಹ, ಹಾಗೂ ಸ್ಮಶಾನ ಮುಂತಾದ ಸಾಕ್ಷಗಳಿವೆ. ಆದರೆ ರಾಮನಗರ ವಲಯ ಅರಣ್ಯಾಧಿಕಾರಿಗಳು ಈ ಒಪ್ಪಂದ ಕಾನೂನು ಬಾಹಿರ ಎಂದು ಹಿಂಬರಹ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ರಾಮನಗರ ಉಪವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿಗೆ ಮನವಿ ಸಲ್ಲಿಸಲಾಗಿತ್ತು. ಅದರಂತೆ ದಿನಾಂಕ 23ರ ಫೆಬ್ರವರಿ 2021ರಂದು ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ , ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮಮಟ್ಟದ ಅರಣ್ಯ ಹಕ್ಕು ಸಮಿತಿ ಜೊತೆಯಲ್ಲಿ ಸ್ಥಳ ಪರಿಶೀಲಿಸಲು ತಿಳಿಸಿತ್ತು.
ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗದಿತ ದಿನಾಂಕದಂದು ಬಂದಿದ್ದರು. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಬರಲಿಲ್ಲ. ಹೀಗಾಗಿ ಅಂದಿನಿಂದ ಅದೇ ಸ್ಥಳದಲ್ಲಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿ ರುವುದಾಗಿ ವಿವರಿಸಿದರು.
ಮತ್ತೆ ಅದೇ ಚಾಳಿ: ದಿನಾಂಕ ಜುಲೈ 17, 2021ರಂದು ಉಪವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯಲ್ಲಿ ಅರಣ್ಯ ಭೂಮಿ ಮಂಜೂರು ಮಾಡಲು ತೀರ್ಮಾನಕ್ಕೆ ಬರಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತೆ ಸ್ಥಳ ಪರಿಶೀಲಿಸಿ ಸಹಿ ಮಾಡುವುದಾಗಿ ಹೇಳಿದರು. ಈ ಹಿನ್ನೆಲೆಯಲ್ಲಿ ಉಪವಿಭಾಗ ಅಧಿಕಾರಿಗಳು ಜುಲೈ 31, 2021 ಸ್ಥಳ ಪರಿಶೀಲನೆಗೆ ದಿನಾಂಕ ನಿಗದಿಪಡಿಸಿದರು. ಆದರೆ ಮತ್ತೆ ಅರಣ್ಯ ಇಲಾಖೆ ತಮ್ಮ ಹಳೆಯ ಚಾಳಿಯನ್ನೇ ಮುಂದುವರೆಸಿದ್ದಾರೆ. ತಮ್ಮ ಪ್ರತಿಭಟನೆ 227ನೇ ದಿನಕ್ಕೆ ಕಾಲಿಟ್ಟರು ಸಹ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.