Advertisement
ಈ ಬಗ್ಗೆ ಎಚ್. ಎಂ.ಟಿ. ವ್ಯಾಪ್ತಿಯಲ್ಲಿನ ಅರಣ್ಯ ಭೂಮಿಯಲ್ಲಿ ಮರಗಳ ಕಡಿದಿರುವುದು ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದೆ. ಈ ಉಪಗ್ರಹ ತೆಗೆದಿರುವ ಚಿತ್ರದಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣಕ್ಕೆ ಸೆಟ್ ಹಾಕಲು ನೂರಾರು ಮರಗಳ ಮಾರಣಹೋಮ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೊದಲು ಹಸಿರು ತುಂಬಿದ ಭೂಮಿ ಹಾಗೂ ನೂರಾರು ಮರಗಳಿರುವುದು ಚಿತ್ರದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಚಿತ್ರೀಕರಣ ಬಳಿಕ ಮರಗಳಿಲ್ಲದೇ ಖಾಲಿ ಪ್ರದೇಶವಾಗಿರುವುದು ಚಿತ್ರದಲ್ಲಿ ಕಾಣಬಹುದಾಗಿದೆ.
ಎಚ್. ಎಂ.ಟಿ. ಅರಣ್ಯ ಭೂಮಿ ವ್ಯಾಪ್ತಿ ಪ್ರದೇಶದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿ ವೀಕ್ಷಣೆ ವೇಳೆ 6 ತಿಂಗಳ ಹಿಂದಿನ ಉಪಗ್ರಹ ಚಿತ್ರ ಹಾಗೂ ಈಗಿನ ಉಪಗ್ರಹ ಚಿತ್ರಗಳ ಪರಿಶೀಲಿಸಿದಾಗ ಕೇವಲ ನೂರಾರು ಮರಗಳಲ್ಲ, ಸಾವಿರಾರು ಮರಗಳು ನಾಶವಾಗಿರುವುದು ಕಂಡು ಬಂದಿದೆ. ಈ ವಿಚಾರವಾಗಿ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವರು ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
Related Articles
ಈ ವಿಚಾರ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳು ಚಿತ್ರೀಕರಣಕ್ಕೆ ಅವಕಾಶ ನೀಡಿದ್ರೆ ಅವರ ಮೇಲೂ ಶಿಸ್ತು ಕ್ರಮ ಕೈಗೊಳ್ಳಬೇಕು ಅಥವಾ ಅಧಿಕಾರಿಗಳ ಗಮನಕ್ಕೆ ಬಾರದೇ ಮರಗಳ ಕಡಿದಿದ್ದರೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದು, ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡು ಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಎಕ್ಸ್ ಖಾತೆಯಲ್ಲಿ ಸಚಿವ ಖಂಡ್ರೆ ಬರೆದುಕೊಂಡಿದ್ದಾರೆ.
Advertisement