Advertisement

ಆನೆ ಕ್ಯಾಂಪ್‌ನಲ್ಲಿ ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ

10:50 PM Dec 11, 2019 | Lakshmi GovindaRaj |

ಮಡಿಕೇರಿ: ಕುಶಾಲನಗರದ ದುಬಾರೆ ಆನೆ ಕ್ಯಾಂಪ್‌ ವೀಕ್ಷಿಸಲು ಬಂದಿದ್ದ ಪ್ರವಾಸಿಗರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ಬಸ್ಸಿನಲ್ಲಿ ಬಂದಿದ್ದ ಪ್ರವಾಸಿಗರ ತಂಡವೊಂದು ಸಾಕಾನೆ ಶಿಬಿರಕ್ಕೆ ಹೋಗಲು ಬೋಟ್‌ ಬೇಕು ಎಂದು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕೇಳಿತ್ತು.

Advertisement

ಆಗ ಸಮಯ ಮೀರಿದ್ದ ಹಿನ್ನೆಲೆಯಲ್ಲಿ ಬೋಟ್‌ನಲ್ಲಿ ಕರೆದೊಯ್ಯಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ ಎಂಬ ಕಾರಣಕ್ಕೆ ಪ್ರವಾಸಿಗರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಜಗಳವಾಗಿತ್ತು. ಈ ಸಂದರ್ಭ ಪ್ರವಾಸಿಗರು ಅರಣ್ಯ ಇಲಾಖೆಯ ದಿನಗೂಲಿ ನೌಕರರಾದ ರವಿ, ತಮ್ಮಯ್ಯ ಹಾಗೂ ರಮೇಶ್‌ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕುಶಾಲನಗರದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next