ಆನೇಕಲ್: ಬನ್ನೇರುಘಟ್ಟ ಸಮೀಪದ ಬ್ಯಾಲಮಾರನದೊಡ್ಡಿ ಅರಣ್ಯ ಭೂಮಿಯಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿರುವವರ ಮೇಲೆ ಅರಣ್ಯಾಧಿಕಾರಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ಜತೆಗೆ ಭೂಮಿ ಯಲ್ಲಿ ವ್ಯವಸಾಯ ಮಾಡುವವರ ವಿರುದ್ಧ ಸುಖಾಸುಮ್ಮನೆ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬ್ಯಾಲಮಾರನದೊಡ್ಡಿ ಕಿರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯಿಂದ ಅಧಿಕೃತ ಮಂಜೂರು ದಾರ ರೈತರು ಪ್ರತಿ ವರ್ಷ ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾರೆ. ಈ ಹಿಂದೆ ಅರಣ್ಯ ಇಲಾಖೆ ಕಿರುಕುಳ ದಿಂದ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ಆಗ ಉಚ್ಚ ನ್ಯಾಯಾಲಯ, 2013ರಲ್ಲಿ ರೈತರನ್ನು ಒಕ್ಕಲೆಬ್ಬಿಸದಿರಲು ಆದೇಶ ನೀಡಿತ್ತು.
ಆದರೆ ಹೊಸದಾಗಿ ಬಂದಿರುವ ಆರ್‌ಎಫ್ಒ, ರೈತರಿಗೆ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ಜತೆಗೆ ಸರ್ವಾಧಿಕಾರಿಯಂತೆ ವರ್ತಿಸುತ್ತಿ ದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿ ಕೃಷ್ಣ, ರೈತರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದಾಗಿ ರೈತರು ಹಾಗೂ ಅರಣ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾ ಯಿಸುವ ಹಂತಕ್ಕೆ ತಲುಪಿತ್ತು.
ನಂತರ ಬನ್ನೇರುಘಟ್ಟ ಪೊಲೀಸರು ಮಧ್ಯ ಪ್ರವೇ ಶಿಸಿ ರೈತರ ಮನವೊಲಿಸಿ ಕಳುಹಿಸಿದ್ದರು. ಘಟನೆಯ ಮಾಹಿತಿ ಪಡೆದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಅರಣ್ಯ ಇಲಾಖೆ ಅಧಿಕಾರಿಗಳ ಕಡತ ಪರಿಶೀಲಿಸಿ, ತಾತ್ಕಾಲಿಕವಾಗಿ ತೊಂದರೆ ನೀಡಬಾರದು ಎಂದು ಅರಣ್ಯಾಧಿಕಾರಿ ಗಳಿಗೆ ಸೂಚಿಸಿದರು. ಅರಣ್ಯ ಇಲಾಖೆ ಅಧಿಕಾರಿ ರೈತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ತನಿಖೆ ಮಾಡಲು ಈಗಾಗಲೇ ಮೇಲಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಬಗ್ಗೆ ಸರ್ಕಾರದ ತದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಚರ್ಚಿಸಿ, ಶೀಘ್ರ ಕ್ರಮಕೈಗೊಳ್ಳುವ ಅವಶ್ಯ ಕತೆಯಿದೆ. ಕೇಂದ್ರ ಹಾಗೂ ರಾಜ್ಯಸರ್ಕಾರದ ಕಾನೂನು ಪರಿಶೀಲನೆ ಮಾಡಿ, ರೈತರ ಬಳಿಯಿರುವ ದಾಖಲೆಪರಿಶೀಲಿಸಿ ಕ್ರಮಕೈಗೊಳ್ಳಬೇಕು. ರೈತರಿಗೆ ಜಮೀನು ಉಳುಮೆ ಮಾಡಲು ರೈತರಿಗೆ ತೊಂದರೆ ನೀಡುವುದು ಸಮಂಜಸವಲ್ಲ ಎಂದು ಸಂಸದ ಡಿ.ಕೆ.ಸುರೇಶ ಹೇಳಿದರು.