Advertisement

Gram Panchayat ನೌಕರರ ಸಮಸ್ಯೆಗೆ ಸಮಿತಿ ರಚಿಸಿ: ಮಂಜುನಾಥ ಭಂಡಾರಿ

11:44 PM Feb 23, 2024 | Team Udayavani |

ಬೆಂಗಳೂರು: ಗ್ರಾಮ ಪಂಚಾಯತ್‌ ನೌಕರರ ಬೇಡಿಕೆಯನ್ನು ಪರಿಶೀಲಿಸಲು ಇಲಾಖಾ ಸಮಿತಿ ನೇಮಿಸಿ, ಸಮಿತಿ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ ಆಗ್ರಹಿಸಿದ್ದಾರೆ.

Advertisement

ವಿಧಾನ ಪರಿಷತ್‌ನಲ್ಲಿ ವಿಷಯ ಪ್ರಸ್ತಾವಿಸಿದ ಅವರು, ಗ್ರಾಪಂ ನೌಕರರಿಗೆ ಕನಿಷ್ಠ ವೇತನ ಬದಲು ಗ್ರಾಮೀಣಾಭಿವೃದ್ಧಿ ಇಲಾಖೆಯಡಿಯಲ್ಲಿ ಸಿ ಮತ್ತು ಡಿ ದರ್ಜೆಯ ವೇತನ ಶ್ರೇಣಿ ನಿಗದಿಪಡಿಸಬೇಕು.

ಆರೋಗ್ಯ ಭದ್ರತೆ, ನಿವೃತ್ತಿ ಉಪಧನ ಮಂಜೂರು ಮಾಡುವುದು ಹಾಗೂ ನೌಕರರಿಗೆ ಅನುಮೋದನೆಯಾಗದ ಎಲ್ಲ ನೌಕರರಿಗೆ ಅನುಮೋದನೆ ಒದಗಿಸುವುದು, ನೌಕರರಿಗೆ ಗ್ರೇಡ್‌-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಮುಂಭಡ್ತಿ ನೀಡಬೇಕು ಎಂಬ ಬೇಡಿಕೆಗಳಿವೆ. ನೌಕರರ ಮೂಲ ಬೇಡಿಕೆಗಳಾದ‌ ಸಿ ಮತ್ತು ಡಿ ದರ್ಜೆಯ ವೇತನ ಶ್ರೇಣಿ, ಆರೋಗ್ಯ ಭದ್ರತೆ, ಸೇವಾ ಭದ್ರತೆ, ಡಾಟಾ ಎಂಟ್ರಿ ಅಪರೇಟರ್‌ಗಳ ಅನುಮೋದನೆ ಸಮಸ್ಯೆ ಮುಂತಾದವುಗಳ ಬಗ್ಗೆ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಶ್ರೇಯೋಭಿವೃದ್ಧಿ ಸಂಘ ಉಲ್ಲೇಖಿಸಿ ತಮ್ಮ ಬೇಡಿಕೆ ಈಡೇರದಿದ್ದರೆ ಮಾರ್ಚ್‌ ಒಂದರಿಂದ ಗ್ರಾಪಂ ನೌಕರರು ಚಳವಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next