Advertisement
ನಗರ ಪಾಲಿಕೆಯ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಶನಿವಾರ ಮಹಾನಗರ ಪಾಲಿಕೆಯ ಪಾಲುದಾರರು ಹಾಗೂ ಸಂಘ ಸಂಸ್ಥೆಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ಪೊಲೀಸರ ಸಹಕಾರ ಅವಶ್ಯಕತೆ ಇದೆ. ತಂಡದಲ್ಲಿ ಪೊಲೀಸರು ಇದ್ದರೆ ಜನರು ಹಾಗೂ ವರ್ತಕರು ಸಹ ಭಯಪಟ್ಟು ದಂಡ ಪಾವತಿಸಿ ಇನ್ನು ಮುಂದೆಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸುತ್ತಾರೆ.ಹಾಗಾಗಿ ಏಕ ಬಳಕೆಯ ಪ್ಲಾಸ್ಟಿಕ್ ಬಳಸುವವರಿಗೆದಂಡ ವಿಧಿಸಲು ಹಾಗೂ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರನ್ನು ಒಳಗೊಂಡ ಸ್ಕ್ವಾಡ್ ರಚಿಸುವಂತೆ ನಗರ ಪಾಲಿಕೆಗೆ ನಿರ್ದೇಶನ ನೀಡಿದರು.
Related Articles
Advertisement
ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ: ತಿರುಪತಿ ಮಾದರಿಯಲ್ಲಿ ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಚಾಮುಂಡಿಬೆಟ್ಟದ ತಪ್ಪಲು ಹಾಗೂ ಬೆಟ್ಟದ ಮೇಲ್ಭಾಗದಲ್ಲಿ ಅನಧಿಕೃತ ಕಟ್ಟಗಳ ನಿರ್ಮಾಣಕ್ಕೆಕಡಿವಾಣ ಹಾಕಬೇಕು. ಬೆಟ್ಟದ ಮೇಲ್ಭಾಗದಲ್ಲಿಮನೆಗಳನ್ನು ನಿರ್ಮಿಸಲು ಅನುಮತಿ ನೀಡುವಸಂದರ್ಭ ಎರಡು ಮಹಡಿಗೆ ಸೀಮಿತವಾಗಿಅನುಮತಿ ನೀಡುವುದು ಸೂಕ್ತ ಎಂದು ಸಲಹೆ ನೀಡಿದರು.
ನಗರ ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಆರೋಗ್ಯಾಧಿಕಾರಿ ಡಾ.ಡಿ.ಜಿ. ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ,ವಿವಿಧ ಸಂಘ ಸಂಸ್ಥೆಗಳ ಪ್ರಮುಖರಾದ ಸುರೇಶ್‌ಕುಮಾರ್ ಜೈನ್, ನಾರಾಯಣ ಗೌಡ, ಗಂಟಯ್ಯ,ಪ್ರೊ.ಎನ್.ಎಸ್. ರಂಗರಾಜು, ವಿಶ್ವನಾಥ್ ಸೇರಿದಂತೆ ಹಲವರು ಇದ್ದರು