Advertisement

Congressನಿಂದ ಬೆಳಗಾವಿ ಅಧಿವೇಶನ ಶತಮಾನೋತ್ಸವ ಸಮಿತಿ ರಚನೆ

10:11 PM Jul 13, 2024 | Team Udayavani |

ಬೆಂಗಳೂರು: ಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ “ಕಾಂಗ್ರೆಸ್‌ ಅಧಿವೇಶನ’ದ ಶತಮಾನೋತ್ಸವ ಸಂಭ್ರಮ ಆಚರಣೆಗಾಗಿ ಕೆಪಿಸಿಸಿಯು “ಬೆಳಗಾವಿ ಅಧಿವೇಶನ ಶತಮಾನೋತ್ಸವ ಸಮಿತಿ’ ರಚಿಸಿದೆ.

Advertisement

ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್‌ ಅಧಿವೇಶನಕ್ಕೆ ಸಾಕ್ಷಿಯಾದ ನೆಲ ಬೆಳಗಾವಿ. ಇದು ಕಾಂಗ್ರೆಸ್‌ ಇತಿಹಾಸದಲ್ಲಿ ಒಂದು ವಿಶೇಷ ಅಧ್ಯಾಯವಾಗಿದೆ. ಈ ಅಧಿವೇಶನವು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರವಹಿಸಿತ್ತು. ಈಗ ಈ ಅಧಿವೇಶನಕ್ಕೆ ಶತಮಾನದ ಸಂಭ್ರಮ. ಇದರ ನೆನಪಿಗಾಗಿ ಎಐಸಿಸಿ ಹಾಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಂಭ್ರಮ ಆಚರಣೆಯನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದೆ.

ಈ ಸಮಾರಂಭ ಯಶಸ್ಸಿಗೆ ಕೆಪಿಸಿಸಿಯಿಂದ ಶತಮಾನೋತ್ಸವ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ಗೌರವ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್ತಿನ ಮಾಜಿ ಸಭಾಧ್ಯಕ್ಷ ಡಾ.ಬಿ.ಎಲ್‌.ಶಂಕರ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಮಿತಿಗೆ ಸಚಿವರು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮೇಲ್ಮನೆ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಸೇರಿ ಒಟ್ಟು 68 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next