Advertisement

ಕೆಎಫ್‌ಡಿ ಸಂಶೋಧನೆಗೆ ಸಮಿತಿ ರಚನೆ

08:49 AM Jan 30, 2019 | |

ಸಾಗರ: ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ನಿಯಂತ್ರಣದ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಿದ್ದು ಹಲವಾರು ವರ್ಷಗಳಿಂದ ಇರುವ ಕಾಯಿಲೆ ಬಗ್ಗೆ ಸಂಶೋಧ‌ನೆ ನಡೆಸಲು ಮದನ್‌ ಗೋಪಾಲ್‌ ಅವರ ನೇತೃತ್ವದಲ್ಲಿ ಮೂರು ಜನರ ತಜ್ಞರ ಸಮಿತಿಯನ್ನು ಮುಖ್ಯಮಂತ್ರಿಗಳು ರಚನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಂಗಳವಾರ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ‌ನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೆ ಸದ್ಯದಲ್ಲಿಯೇ ತೀರ್ಮಾನಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಅರಳಗೋಡು ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯ ಅನೇಕ ಭಾಗದಲ್ಲಿ ಮಂಗನ ಕಾಯಿಲೆಯು ಆವರಿಸುತ್ತಾ ಇದೆ. ಜನರು ಭಯಭೀತರಾಗಿ ಕೃಷಿ ಚಟುವಟಿಕೆಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಕಾಯಿಲೆಯು ಭೀಕರ ಸ್ವರೂಪವನ್ನು ಪಡೆದಿದ್ದು 9 ಜನರನ್ನು ಬಲಿ ತೆಗೆದುಕೊಂಡಿದೆ. ಕಾಯಿಲೆಯ ಮುಂಜಾಗ್ರತಾ ಕ್ರಮವಾಗಿ ಕೊಡಬೇಕಾದ ಲಸಿಕೆ ಹಾಗೂ ಡಿಎಂಪಿ ಆಯಿಲ್‌ ಸರಬರಾಜು ಕೊರತೆಯಿಂದ ಜನರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವುದರ ಬಗ್ಗೆ ಕಾಗೋಡು ಮುಖ್ಯಮಂತ್ರಿಗಳ ಗಮನ ಸೆಳೆದರು.

ಬುಧವಾರದಿಂದಲೇ ಲಸಿಕೆ ಹಾಗೂ ಡಿಎಂಪಿ ಆಯಿಲ್‌ ಕೊರತೆಯನ್ನು ನೀಗಿಸಬೇಕು ಎಂದು ಖಡಕ್‌ ಸೂಚನೆಯನ್ನು ಸಿಎಂ ಅಧಿಕಾರಿಗಳಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಶಿವಾನಂದ ಪಾಟೀಲ್‌ ಅವರು ಇದ್ದರು. ಅವರು ಭೆೇಟಿ ನೀಡಿದ್ದ ಸಂದರ್ಭದಲ್ಲಿನ ಪರಿಸ್ಥಿತಿ ಕುರಿತಂತೆ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಕಾಗೋಡು ಪತ್ರಿಕೆಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next