Advertisement

ಶಾಲಾ-ಕಾಲೇಜು ಶುಲ್ಕ ಸಮಸ್ಯೆ ಪರಿಹಾರಕ್ಕೆ ಸಮಿತಿಗಳ ರಚನೆ:  ಸುರೇಶ್ ಕುಮಾರ್

08:48 PM Feb 03, 2021 | Team Udayavani |

ಬೆಂಗಳೂರು:  ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲಾ  ಕಾಲೇಜುಗಳ ಶುಲ್ಕಗಳ ಕುರಿತ ಪೋಷಕರ ತಕರಾರುಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಲಾಗಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement

ಕೋವಿಡ್-19  ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು 2019-20ನೇ ಸಾಲಿನ ಬೋಧನಾ ಶುಲ್ಕದ ಶೇ. 70ರಷ್ಟು ಮೊತ್ತವನ್ನು ಒಟ್ಟಾರೆ ಶುಲ್ಕವನ್ನಾಗಿ ಪಡೆಯಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಜ. 29ರಂದು ಆದೇಶ ಹೊರಡಿಸಿದ್ದು, ಆದೇಶದ ಭಾಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯ ಈ ಕುರಿತಾದ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 6 ವಲಯಗಳಲ್ಲಿ ಪ್ರತ್ಯೇಕ ಸಮಿತಿಗಳು, ಮೈಸೂರು ಜಿಲ್ಲೆಯಲ್ಲಿ 2  ಸೇರಿದಂತೆ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಂದೊಂದು ಸಮಿತಿಯನ್ನು ರಚಿಸಲಾಗಿದೆ. ಇಲಾಖಾ ನಿರ್ದೇಶಕರು, ಸಹ ನಿರ್ದೇಶಕರು, ಡಿಡಿಪಿಐ, ಡಯಟ್ ಪ್ರಾಚಾರ್ಯರು, ಡಯಟ್‍ನ ಹಿರಿಯ ಉಪನ್ಯಾಸಕರನ್ನೊಳಗೊಂಡ ವಿವಿಧ ಜಿಲ್ಲಾ ಸಮಿತಿಗಳನ್ನು ರಚಿಸಲಾಗಿದೆ ಎಂದು  ಸುರೇಶ್  ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ:ಶಾಸಕ ಶ್ರೀನಿವಾಸ್‌ ಮಂತ್ರಿಯಾಗಲಿ: ಜಿ.ಟಿ.ದೇವೇಗೌಡ

ಪೋಷಕರು ಪ್ರಸ್ತುತ ವರ್ಷದ  ಶುಲ್ಕ ಪಾವತಿಯ ಕುರಿತಾದ ಸಮಸ್ಯೆಗಳನ್ನು ಈ ಸಮಿತಿಯ ಮುಂದೆ ಪ್ರಸ್ತಾಪಿಸಿ ಪರಿಹರಿಸಕೊಳ್ಳಬಹುದೆಂದು ಸಚಿವರು ತಿಳಿಸಿದ್ದಾರೆ.

Advertisement

ಇಂತಹ ಸಮಸ್ಯೆಗಳ  ಸಂದರ್ಭದಲ್ಲಿ, ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸುವ ಕುರಿತು  ಪೋಷಕರು, ಶಾಲೆಗಳು  ಯಾವ ಕ್ರಮಗಳನ್ನು ಅನುಸರಿಸಬೇಕು ಮತ್ತು   ಅರ್ಜಿ ಸ್ವೀಕರಿಸುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮಿತಿಗಳ  ಕರ್ತವ್ಯಗಳ ಕುರಿತು ಸವಿವರ ಕ್ರಮಗಳನ್ನು ಸುತ್ತೋಲೆಯಲ್ಲಿ ವಿವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next