Advertisement

ಗ್ರಾಮೀಣಾಭಿವೃದ್ಧಿ ಇಲಾಖೆ ನೌಕರರ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚನೆ

08:25 AM Sep 22, 2019 | Sriram |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪನವರು ಇಂದು ವಿಧಾನಸೌಧದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಗ್ರಾಮೀಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಸಭೆ ನಡೆಸಿದರು.

Advertisement

ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಅವುಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಅನುಕೂಲಕ್ಕಾಗಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ.

ಈ ಸಮಿತಿಯಲ್ಲಿ ಶ್ರೀಮತಿ ಅಪರ್ಣಾ ಪಾವಟೆ, ಶ್ರೀ ಸಿದ್ದೇಶ ಪೋತಲಕಟ್ಟಿ, ಶ್ರೀ ಅಶ್ರಫುಲ್ಲ ಹಸನ್ , ಶ್ರೀ ರೇವಣಪ್ಪ, ಸಿದ್ದರಾಮಯ್ಯ, ಶ್ರೀ ರಾಮಕೃಷ್ಣ, ಪದ್ಮನಾಭ ಸೇರಿದಂತೆ ಹಲವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಇಲಾಖೆಯಲ್ಲಿಯ ಅಧಿಕಾರಿ ಮತ್ತು ನೌಕರ ವರ್ಗದ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ ವರದಿ ಸಿದ್ದಪಡಿಸಲು ಮಾನ್ಯ ಸಚಿವರು ಸೂಚಿಸಿದ್ದಾರೆ.

ಅಧಿಕಾರಿಗಳಿಗೆ ಸಚಿವರ ತಾಕೀತು
ಸಭೆಯಲ್ಲಿ ನೆರೆದಿದ್ದ ಅಧಿಕಾರಿಗಳು ಮತ್ತು ನೌಕರರಿಗೆ ಇಂದು ಸಚಿವರು ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂಧಿಸುವಂತೆ ತಾಕೀತು ಮಾಡಿದರು. ಪಂಚಾಯತ್ ರಾಜ್ ಇಲಾಖೆಯಲ್ಲಿಯ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಸರಿಯಾಗಿ ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುತ್ತಿಲ್ಲ ಎಂಬಂತಹ ಗಂಭೀರ ತರಹದ ಆರೋಪಗಳಿವೆ ಈಗಾಗಲೇ ನಮ್ಮ ಗಮನಕ್ಕೆ ಬಂದಿವೆ.

ಇನ್ನು ಮುಂದೆ ಏನೇ ದೂರುಗಳು ಬಂದರೂ ಕೂಡ ನಿರ್ಧಾಕ್ಷೀಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾವುದು ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದರು.

Advertisement

ಜನರ ಕುಂದು ಕೊರತೆಗಳಿಗೆ ಮತ್ತು ಸಮಸ್ಯೆಗಳ ತುರ್ತನ್ನು ಅರಿತುಕೊಂಡು ಕೆಲಸ ಮಾಡುವಂತೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next