Advertisement

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರಚನೆ: ಸ್ವಾಗತ

10:58 PM Feb 05, 2020 | Lakshmi GovindaRaj |

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಸಂಬಂಧಪಟ್ಟ ವಿಷಯಗಳ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ “ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ‘ ರಚಿಸುವುದಾಗಿ ಪ್ರಕಟಿಸಿರುವುದನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ವಾಗತಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ “ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌’ ರಚಿಸಲು ಕೈಗೊಂಡಿರುವ ತೀರ್ಮಾನವನ್ನು ವೈಯಕ್ತಿಕವಾಗಿ ಹಾಗೂ ರಾಜ್ಯದ ಜನತೆ ಪರವಾಗಿ ಅಭಿನಂದಿಸುತ್ತೇನೆ. ಐತಿಹಾಸಿಕ ನಿರ್ಧಾರದ ಮೂಲಕ ಪ್ರಧಾನಿ ಮೋದಿಜೀ ಭಾರತ ಮಾತ್ರವಲ್ಲದೆ, ಜಗದಗಲದ ಲಕ್ಷಾಂತರ ಜನರ ಭಾವನೆಗಳಿಗೆ ಗೌರವ ಸಲ್ಲಿಸಿದ್ದಾರೆ.

ಈ ಪುಣ್ಯ ಕಾರ್ಯದಲ್ಲಿ ಕರ್ನಾಟಕವೂ ಸಂಪೂರ್ಣವಾಗಿ ಕೇಂದ್ರದ ಜೊತೆಗಿದೆ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ “ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌’ ರಚಿಸಲು ಬುಧವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಪ್ರಧಾನಿ ಲೋಕಸಭೆಯಲ್ಲಿ ಪ್ರಕಟಿಸಿದ್ದಾರೆ.

ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ಬಿಜೆಪಿ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು. ಇದರಿಂದ ಅಯೋಧ್ಯೆ ಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿವೆ. ಕೋಟ್ಯಂತರ ಭಾರತೀಯರು, ಮುಖ್ಯವಾಗಿ ಹಿಂದೂಗಳ ಕನಸು ಈಡೇರುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿಗೆ ಅನಂತ ವಂದನೆಗಳು ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next