Advertisement

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

12:39 AM Jul 27, 2024 | Team Udayavani |

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್‌ ಪರಿಸರಕ್ಕೆ ಮಾರಕವಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲೂ ಮಾರ್ಷಲ್‌ಗ‌ಳನ್ನು ಒಳಗೊಂಡ ಕಾರ್ಯಪಡೆ ರಚಿಸಿ ಏಕ ಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳ ಮಾರಾಟ, ದಾಸ್ತಾನು ಮತ್ತು ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಸಚಿವ ಈಶ್ವರ್‌ ಖಂಡ್ರೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ವಿಕಾಸಸೌಧದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಎಲ್ಲ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳಾದ ಕ್ಯಾರಿಬ್ಯಾಗ್‌, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಾಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ತಿಳಿಸಿದರು. ಏಕ ಬಳಕೆ ಪ್ಲಾಸ್ಟಿಕ್‌ ಮತ್ತು ಪ್ಲಾಸ್ಟಿಕ್‌ ಉತ್ಪನ್ನಗಳು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವುದನ್ನು ನಿಯಂತ್ರಿಸಲು ಸಾರಿಗೆ, ಪೊಲೀಸ್‌, ವಾಣಿಜ್ಯ ತೆರಿಗೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next