Advertisement
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಆ. 2ರಂದು ದಿಲ್ಲಿಯಿಂದ ಹುಬ್ಬಳ್ಳಿಗೆ ಆಗಮಿಸಿ, ಹುಬ್ಬಳ್ಳಿಯಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಮುಂಬರುವ ಎಂಟು ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಸಂದರ್ಭ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿರುವುದು. ಕಾಂಗ್ರೆಸ್‌ನಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಗೊಂದಲ ನಿವಾರಣೆಗೆ ರಾಹುಲ್ ಗಾಂಧಿ ಮುಂದಾಗಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ಕರೆದಿದ್ದಾರೆಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
Related Articles
Advertisement
ಮಠಗಳ ಭೇಟಿಗೆ ರಾಹುಲ್‌ಗೆ ಬೇಡಿಕೆರಾಹುಲ್ ಗಾಂಧಿ ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು, ರಾಜ್ಯದ ಪ್ರಮುಖ ವೀರಶೈವ ಲಿಂಗಾಯತ ಮಠಗಳಿಗೆ ಭೇಟಿ ನೀಡುವಂತೆ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭ ಮೂರುಸಾವಿರ ಮಠಕ್ಕೆ ಭೇಟಿ ನೀಡಲು ಮನವಿ ಮಾಡಿಕೊಳ್ಳಲಾಗಿದ್ದು, ರಾಹುಲ್ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ. ಅನಂತರ ಸಿದ್ದರಾಮೋತ್ಸವ ಕಾರ್ಯಕ್ರಮದ ದಿನ ಚಿತ್ರದುರ್ಗದ ಮುರುಘಾ ಮಠ, ಸಾಣೆಹಳ್ಳಿ ಮಠಗಳಿಗೆ ಭೇಟಿ ನೀಡುವಂತೆ ರಾಜ್ಯ ನಾಯಕರು ಮನವಿ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.