Advertisement

ಅಲಿಗಢ ಮುಸ್ಲಿಂ ವಿವಿಯ ಮಾಜಿ ವಿದ್ಯಾರ್ಥಿಯ ಮೇಲೆ ಗುಂಡು; ಸ್ಥಿತಿ ಚಿಂತಾಜನಕ

09:33 PM Feb 04, 2023 | Team Udayavani |

ಅಲಿಗಢ: ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (ಎಎಂಯು) ಮಾಜಿ ವಿದ್ಯಾರ್ಥಿಗೆ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನ ಹೊರಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Advertisement

ರಾಸ್ ಮಸೂದ್ ಹಾಲ್ ಹಾಸ್ಟೆಲ್‌ನಲ್ಲಿ ಬೋರ್ಡರ್ ಆಗಿರುವ ಮೊಹಮ್ಮದ್ ಫೈಜಾನ್ ಅವರನ್ನು ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಫೆಬ್ರವರಿ 3 ರ ರಾತ್ರಿ ಫೈಜಾನ್ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಎಂಯು ಪ್ರೊಕ್ಟರ್ ಎಂಡಿ ವಸೀಮ್ ಪಿಟಿಐಗೆ ತಿಳಿಸಿದ್ದಾರೆ. ”ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಿದ್ದಾರೆ,” ಎಂದು ಅವರು ಹೇಳಿದರು.

ಕಾನೂನು ಸುವ್ಯವಸ್ಥೆ ವಿರುದ್ಧ ಎಎಂಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರಜಾಸತ್ತಾತ್ಮಕ ಹಕ್ಕುಗಳ ಮರುಸ್ಥಾಪನೆಗಾಗಿ ವಿದ್ಯಾರ್ಥಿ ಸಂಘ ಸೇರಿದಂತೆ ವಿವಿಧ ಪ್ರಾತಿನಿಧಿಕ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಉಪಕುಲಪತಿಗಳಿಗೆ ಮನವಿ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿರುವ ಮತ್ತು ಸಂಸ್ಥೆಗೆ ಮಾನಹಾನಿ ಮಾಡುವವರ ವಿರುದ್ಧ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next