ನವದೆಹಲಿ: ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.
ನವದೆಹಲಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ಕಾಂಗ್ರೆಸ್ ಹೈಕಮಾಂಡ್‌ನ ಕೆಟ್ಟ ನಿರ್ಧಾರಗಳಿಂದ ಎಲ್ಲಾ ರಾಜ್ಯಗಳು ತೊಂದರೆ ಅನುಭವಿಸುತ್ತಿವೆ. ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಹಾಳಾಗುತ್ತಿದೆ. ನಾಯಕರು ಜನರ ಜತೆ ಚರ್ಚಿಸುತ್ತಿಲ್ಲ. ನಾಯಕರ ಅಭಿಪ್ರಾಯಗಳನ್ನು ಪರಿಗಣಿಸುತ್ತಿಲ್ಲ. ಇದು ಒಂದು ರಾಜ್ಯದ ಕತೆಯಲ್ಲ. ಎಲ್ಲಾ ರಾಜ್ಯಗಳಲ್ಲಿಯೂ ಇದೇ ಕತೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
2014ರಲ್ಲಿ ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣ ರಾಜ್ಯ ಸೃಷ್ಟಿಸುವ ಅಂದಿನ ಯುಪಿಎ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು ಆ ಬಳಿಕ ಜೈ ಸಮೈಕ್ಯಂಧ್ರ ಎಂಬ ಸ್ವಂತ ಪಕ್ಷವನ್ನು ಸ್ಥಾಪಿಸಿದ ಅವರು 2014ರ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರು.ಆದರೆ ಯಾವುದೇ ಲಾಭವಿಲ್ಲದೆ ದೀರ್ಘಕಾಲ ರಾಜಕೀಯದಿಂದ ದೂರ ಉಳಿದಿದ್ದ ಕಿರಣ್ ರೆಡ್ಡಿ ಮತ್ತೆ 2018ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ಇದನ್ನೂ ಓದಿ:IPL 2023 ರೀಸ್ ಟೋಪ್ಲೆಗೆ ಗಾಯ: ಆರ್ ಸಿಬಿ ಕ್ಯಾಂಪ್ ಸೇರಿದ ದ.ಆಫ್ರಿಕಾ ಎಡಗೈ ವೇಗಿ
ನಿನ್ನೆಯಷ್ಟೇ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.