ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂ ನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಹದಗೆಟ್ಟಿದ್ದು, ಉಸಿರಾಟದ ತೊಂದರೆಯಿಂದ ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಅಸ್ಸಾಂ ಆರೋಗ್ಯ ಸಚಿವರು ಹೇಳಿದ್ದಾರೆ.
ತರುಣ್ ಗೊಗೊಯ್ ಅವರಿಗೆ 86 ವರ್ಷ ವಯಸ್ಸಾಗಿದ್ದು ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರನ್ನು ನವೆಂಬರ್ 2 ರಂದು ಗೌಹತಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ:ಡಿ.10ರಿಂದ ಮೈಸೂರು – ಮಂಗಳೂರು ನಡುವೆ ವಿಮಾನ ಸೇವೆ ಆರಂಭ
ಇಂದು ಮಧ್ಯಾಹ್ನ, ಉಸಿರಾಟದ ತೊಂದರೆಗಳಿಂದ ಅವರ ಅರೋಗ್ಯ ಸ್ಥಿತಿ ಹದಗೆಟ್ಟಿದ್ದು, ವೈದ್ಯರು ಇಂಟ್ಯೂಬೇಶನ್ ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.