ಅಸ್ಸಾಂ ; ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ದೃಢಪಡಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಹೇಳಿದಂತೆ ಮಂಗಳವಾರ ಅವರ ಕೋವಿಡ್ ಪರೀಕ್ಷೆ ನಡೆಸಿದ್ದು ವರದಿಯಲ್ಲಿ ಸೋಂಕು ದೃಢಪಟ್ಟಿದ್ದು ದಯವಿಟ್ಟು ತನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.
ಸದ್ಯ ಹೋಮ್ ಐಸೋಲೇಷನ್ ನಲ್ಲಿ ಇರುವ ಗೊಗೊಯ್ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದಿದ್ದಾರೆ.
Related Articles
ಈ ಹಿಂದೆ ತರುಣ್ ಗೊಗೊಯ್ ಅವರ ಪತ್ನಿ ಡಾಲಿ ಗೊಗೊಯ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು.
ತರುಣ್ ಗೊಗೊಯ್ ಅವರಿಗೆ ಕೋವಿಡ್ ದೃಢ ಪಟ್ಟ ಹಿನ್ನೆಲೆಯಲ್ಲಿ ಅವರು ಶೀಘ್ರ ಗುಣಮುಖರಾಗಿ ಬರಲಿ ಹಾಗೂ ಅವರ ಆರೋಗ್ಯದ ದೃಷ್ಟಿಯಿಂದ ಅವರ ಚಿಕಿತ್ಸೆಗೆ ಹಿರಿಯ ವೈದ್ಯರ ತಂಡವನ್ನು ನೇಮಿಸಲಾಗುವುದು ಎಂದು ಅಸ್ಸಾಂ ನ ಅರೋಗ್ಯ ಸಚಿವರಾದ ಹಿಮಂತ್ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.