Advertisement

ಲಕ್ಷ್ಮಣ ಸವದಿ Congress ಸೇರ್ಪಡೆ ; BJPಗೆ ಹಿನ್ನಡೆ ಇಲ್ಲ ಎಂದ ಅರುಣ್ ಸಿಂಗ್

08:27 PM Apr 14, 2023 | Team Udayavani |

ಬೆಂಗಳೂರು : ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಶುಕ್ರವಾರ ಬಿಜೆಪಿಗೆ ರಾಜೀನಾಮೆ ಸಲ್ಲಿಸಿ, ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದರು.

Advertisement

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಸವದಿ, ಮಾಜಿ ಸಚಿವರಾದ ಶಶಿಕಾಂತ್ ನಾಯಕ್, ಮುಖಂಡರಾದ ಅಕ್ಕಪ್ಪ ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಿ.ಎನ್. ಚಂದ್ರಪ್ಪ, , ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ.ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಕೇವಲ ಅಧಿಕಾರ
ಬಿಜೆಪಿ ತನ್ನ ತತ್ವ ಸಿದ್ದಾಂತಗಳನ್ನು ಅನುಸರಿಸುತ್ತಿಲ್ಲ,ಅಲ್ಲಿ ಕೇವಲ ಅಧಿಕಾರ ರಾಜಕಾರಣವಿದೆ. ಹಳೆಯ ಬಿಜೆಪಿ ಎಲ್ಲಿಯೂ ಕಾಣಿಸುತ್ತಿಲ್ಲ, ಅವರು ಯಾವುದೇ ಬೆಲೆ ತೆತ್ತಾದರೂ ಅಧಿಕಾರದಲ್ಲಿರಲು ಬಯಸುತ್ತಾರೆ. ನಾವು ಈಗ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಹಿನ್ನಡೆ ಇಲ್ಲ
“ಬಿಜೆಪಿಗೆ ಹಿನ್ನಡೆ ಇಲ್ಲ, ಕಾಂಗ್ರೆಸ್ ಶೀಘ್ರದಲ್ಲೇ ಲಕ್ಷ್ಮಣ ಸವದಿ ಅವರ ಸ್ಥಾನ ಯಾವುದು ಎಂದು ತೋರಿಸಲಿದೆ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next