ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಅವರು ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶೀತ, ಜ್ವರ ಕಾಣಿಸಿಕೊಂಡ ಪರಿಣಾಮ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಪಾಸಿಟಿವ್ ವರದಿ ಬಂದಿದೆ.
ಇತ್ತೀಚಿಗೆ ಹೆಚ್.ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಹಾಗೂ ತಾಯಿ ಚನ್ನಮ್ಮ ವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಆ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.