Advertisement

ಬಿಜೆಪಿ ಸೇರಿದ ರತ್ನಪ್ರಭಾ

02:52 AM Apr 04, 2019 | Team Udayavani |

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ಡಾ.ಉಮೇಶ ಜಾಧವ ನಡುವೆ ತೀವ್ರ ಪೈಪೋಟಿ ನಡೆದ ಬೆನ್ನಲ್ಲೇ ಮುಖಂಡರ ಪಕ್ಷಾಂತರವೂ ಜೋರಾಗಿದೆ.

Advertisement

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಡಾ| ಬಾಬು ಜಗಜೀವನರಾಂ ಹೋರಾಟ ಸಮಿತಿ ರಾಜ್ಯಾಧ್ಯಕ್ಷ, ಮಾದಿಗ ಸಮಾಜದ ಹಿರಿಯ ಮುಖಂಡ ಭೀಮಣ್ಣ ಟಿ. ಬಿಲ್ಲದ್‌ ಬುಧವಾರ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಪ್ರಮುಖ ಮುಖಂಡರನ್ನು ಸೆಳೆಯುವಲ್ಲಿ ಕಾಂಗ್ರೆಸ್‌ ಕೂಡ ಹಿಂದೆ ಬಿದ್ದಿಲ್ಲ. ಎರಡು ದಿನಗಳ ಹಿಂದಷ್ಟೇ ಮಾಜಿ ಸಚಿವ ಕೆ.ಬಿ. ಶಾಣಪ್ಪ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ ಆಗಿದ್ದರು. ಬುಧವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಸಚಿವ ಬಾಬುರಾವ ಚವ್ಹಾಣ ಅವರು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

Advertisement

Udayavani is now on Telegram. Click here to join our channel and stay updated with the latest news.

Next