Advertisement

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

11:03 PM Sep 28, 2023 | Team Udayavani |

ಬೆಂಗಳೂರು: ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಶನಿವಾರ ದಿಲ್ಲಿಗೆ ತೆರಳುವ ಸಾಧ್ಯತೆ ಇದೆ.

Advertisement

ರಾಜಸ್ಥಾನ, ಮಧ್ಯಪ್ರದೇಶ, ಛ‌ತ್ತೀಸಘಡ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣೆಗೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣ ಸಮಿತಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ ಈ ಭೇಟಿ ಸಂದರ್ಭದಲ್ಲಿ ಜೆಡಿಎಸ್‌ ಜತೆಗಿನ ಮೈತ್ರಿ ಬಗ್ಗೆ ಯಾವುದೇ ಮಾತುಕತೆ ನಡೆಯುವ ಸಾಧ್ಯತೆಗಳಿಲ್ಲ. ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಬಗ್ಗೆಯೂ ಚರ್ಚೆ ನಡೆಯುವ ಸಂಭವ ಕಡಿಮೆ. ಯಡಿಯೂರಪ್ಪ ಪ್ರಯಾಣ ಇನ್ನೂ ನಿಗದಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಸಮಯ ಲಭ್ಯತೆ ಆಧರಿಸಿ ಚುನಾವಣ ಸಮಿತಿಯ ಸಭೆಗೆ ಸಮಯ ನಿಗದಿಯಾಗಲಿದೆ.

ಕೋಲಾರ ಎಸ್‌ಪಿ ಅಮಾನತು ಆಗ್ರಹಿಸಿ ಅ.3ರಂದು ಪ್ರತಿಭಟನೆ
ಬೆಂಗಳೂರು: ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ರೈತರನ್ನು ಅಕ್ರಮವಾಗಿ ಒಕ್ಕಲೆಬ್ಬಿಸಿ ಅಪಾರ ಬೆಳೆ ಹಾನಿ ಮಾಡಿದ ಡಿಎಫ್ಒ ಮತ್ತು ಸಂಸದ ಮುನಿಸ್ವಾಮಿ ಮೇಲೆ ದೌರ್ಜನ್ಯ ಮಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಅಮಾನತು ಮಾಡದಿದ್ದರೆ ಅ.3ರಂದು ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಈ ಎಚ್ಚರಿಕೆ ನೀಡಿದ್ದು, ಈ ಸರಕಾರ ಅಧಿಕಾರದ ಅಮಲಿನಲ್ಲಿದೆ. ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಕೋಲಾರ ಜಿÇÉೆಯಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಶ್ನಿಸಿದ ಸಂಸದರನ್ನೇ ವೇದಿಕೆಯಿಂದ ಕೆಳಕ್ಕೆ ಇಳಿಸಿ¨ªಾರೆ. ಜನತಾ ದರ್ಶನದ ಉದ್ದೇಶಕ್ಕೆ ವಿರುದ್ಧವಾಗಿ ಕಾರ್ಯಕ್ರಮ ನಡೆದಿದೆ. ಎಸ್ಪಿಯವರು ಅಕ್ಷರಶಃ ನಮ್ಮ ಸಂಸದರನ್ನು ಎತ್ತಿಕೊಂಡು ಹೋಗಿದ್ದಾರೆ. ಆದ್ದರಿಂದ ಕೂಡಲೇ ಎಸ್‌ಪಿ ನಾರಾಯಣ್‌ ಅವರನ್ನು ಅಮಾನತುಗೊಳಿಸಬೇಕು. ಇಲ್ಲವಾದರೆ ಅ.3ರಂದು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Advertisement

ಬಿಎಂಎಸ್‌ ಹಗರಣದ ತನಿಖೆಗೆ ಸಮಿತಿ ರಚಿಸಲು ನಿರ್ಧಾರ
ಬೆಂಗಳೂರು: ಹಿಂದಿನ ಸರಕಾರದ ಅವಧಿಯ ಬಿಎಂಎಸ್‌ ಕಾಲೇಜು ಹಗರಣದ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್‌ ಅಧಿಕಾರಿ ೇತೃತ್ವದಲ್ಲಿ ಸಮಿತಿ ರಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಉನ್ನತ ಶಿಕ್ಷಣ ಸಚಿವ ಡಾ| ಸುಧಾಕರ್‌ ಜತೆಗೆ ಈ ಸಂಬಂಧ ಸುದೀರ್ಘ‌ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ತನಿಖಾಧಿಕಾರಿಯನ್ನು ನೇಮಕ ಮಾಡುವ ಅಧಿಕಾರವನ್ನು ಕೂಡ ಮುಖ್ಯಮಂತ್ರಿಗೆ ನೀಡಲಾಗಿದೆ. ಬಿಜೆಪಿ ಅವಧಿಯಲ್ಲಿ ನಡೆದ ಬಿಎಂಎಸ್‌ ಹಗರಣದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಪ್ರಸ್ತಾವಿಸಿ, ಸಾವಿರಾರು ಕೋಟಿ ರೂ. ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದರು.

ಶುಕ್ರವಾರ ನಡೆಯುವ ಕರ್ನಾಟಕ ಬಂದ್‌ಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಕಾವೇರಿ ವಿಚಾರದಲ್ಲಿ ನಡೆಸುವ ಎಲ್ಲ ಹೋರಾಟಕ್ಕೂ ನಮ್ಮ ಬೆಂಬಲವಿರುತ್ತದೆ.
-ಎನ್‌.ರವಿಕುಮಾರ್‌,
ವಿಧಾನ ಪರಿಷತ್‌ ಸದಸ್ಯ

Advertisement

Udayavani is now on Telegram. Click here to join our channel and stay updated with the latest news.

Next