Advertisement

ರಾಜ್ಯದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿ ಆರಂಭ: ಯಡಿಯೂರಪ್ಪನವರಿಗೆ ಮೊದಲ ವರ್ಷದ ಪುರಸ್ಕಾರ

03:23 PM Sep 24, 2021 | Team Udayavani |

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇರುವಂತೆ ರಾಜ್ಯದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಆರಂಭಿಸಿಲಾಗಿದೆ. ಮೊದಲ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿ ಗೌರವಿಸಲಾಗಿದೆ.

Advertisement

ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಪ್ರತೀ ವರ್ಷ ವರ್ಷದ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ ನೀಡಲಾಗುತ್ತದೆ. ಅದೇ ರೀತಿ ರಾಜ್ಯದ ವಿಧಾನಸಭೆಯಲ್ಲೂ ಈ ವರ್ಷದಿಂದ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಲಾಗುತ್ತದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಇದನ್ನೂ ಓದಿ:ಪಿಎಂ ಕೇರ್ಸ್‌ ಫಂಡ್ ಭಾರತ ಸರಕಾರದ ನಿಧಿ ಅಲ್ಲ; ಹೈಕೋರ್ಟ್ ಗೆ ಕೇಂದ್ರ

ಮೊದಲ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲಾಯಿತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪ ನವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಇತರರು ಹಾಜರಿದ್ದರು.

ವಿಧಾನಮಂಡಲದ ವತಿಯಿಂದ ಉಭಯ ಸದನಗಳ ಸದಸ್ಯರಿಗೆ ಇಂದು ಏರ್ಪಡಿಸಿರುವ ಭೋಜನಕೂಟದಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಪಾಲ್ಗೊಂಡರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next