Advertisement

ಪ್ರವಾಹ ಪರಿಸ್ಥಿತಿಯಲ್ಲಿ ಸರ್ಕಾರ ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ: HDK

05:58 PM Aug 07, 2020 | keerthan |

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕೋವಿಡ್ ಮಧ್ಯೆ ಇದು ಸರ್ಕಾರಕ್ಕೆ ಅಗ್ನಿಪರೀಕ್ಷೆಯಾಗಿದ್ದು, ಸರ್ಕಾರ ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೋವಿಡ್ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದಿದ್ದಾರೆ.

ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಲೆನಾಡಿನಲ್ಲಿ ಮಳೆಯ ಆರ್ಭಟ: ಪ್ರವಾಹಕ್ಕೆ ಮುಳುಗಿದ ಕಾರು, ಮಂಗಳೂರು ಶೃಂಗೇರಿ ಹೆದ್ದಾರಿ ಬಂದ್

ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದರು.

Advertisement

ಇದನ್ನೂ ಓದಿ: ನಿಲ್ಲದ ವರುಣನ ಅಬ್ಬರ: ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಳ; ಕುಡಚಿ ಸೇತುವೆ ಮುಳುಗಡೆ

ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.

ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಎಚ್ ಡಿಕೆ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next