Advertisement

ರಾಜಕಾರಣದ ಮೇಲೆ ಒಲವಿಲ್ಲ, ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ: ಹೆಚ್‌ ಡಿಕೆ

02:13 PM Jun 12, 2023 | Team Udayavani |

ರಾಮನಗರ: ನೀವು ಬಿಜೆಪಿ ವಿರುದ್ಧ 40% ಅಂತ ಡಂಗೂರ ಹೊಡೆದ್ರಲ್ಲ ಯಾವ ಸಾಕ್ಷಿ ಇಟ್ಟಿದ್ರಿ.? ಅವನ್ಯಾರೋ ಗುತ್ತಿಗೆದಾರ ದೂರು ಕೊಟ್ರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ನೀವು 40% ಬಗ್ಗೆ ಆರೋಪಿಸಿದ್ರಲ್ಲ ಯಾಕೆ ಲೋಕಾಯುಕ್ತಕ್ಕೆ ದೂರು ಕೊಡಲಿಲ್ಲ.ಈಗ ಅಧಿಕಾರದಲ್ಲಿದ್ದೀರಲ್ಲಾ ಅದರ ಬಗ್ಗೆ ತನಿಖೆ ಮಾಡಿಸಿ ಎಂದು ಕಾಂಗ್ರೆಸ್ ವಿರುದ್ಧದ 640ಕೋಟಿ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Advertisement

ಚನ್ನಪಟ್ಟಣದಲ್ಲಿ ಮಾತಾನಾಡಿದ ಅವರು ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಆನಂದ್‌ ಮಹೀಂದ್ರಾ ಹಂಚಿಕೊಂಡ ಭಾರತದ ಸುಂದರ ತಾಣಗಳಲ್ಲಿ ಕರ್ನಾಟಕದ ಈ ಗ್ರಾಮವೂ ಸೇರಿದೆ!

ನನಗೆ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ.ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ. ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳುತ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ ಎಂದು ಸಂಸದ ಡಿ.ಕೆ.ಸುರೇಶ್ ಹೆಸರೇಳದೆ ಹೆಚ್‌ ಡಿಕೆ ಟಾಂಗ್‌ ಕೊಟ್ಟರು.

ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತೇವೆ ಅಂತಿದ್ದಾರೆ. ಆದರೆ ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಮೊದಲು ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೇವಿ ಅಂದರು. ಈಗ ಮಾಲೀಕರು ಬಾಡಿಗೆದಾರರು ಅಗ್ರಿಮೆಂಟ್ ಕೊಡ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡ್ದಾಗ ನನಗೂ ಫ್ರೀ, ನಿನಗೂ ಫ್ರೀ ಅಂದ್ರಿ.! ಈಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ನೋಡಬೇಕು ಎಂದು ಹೇಳಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next