Advertisement

ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಮನೆಯಲ್ಲಿ ಮಲಗಿ ಎನ್ನುವಂತಿದೆ ಬಜೆಟ್: HDK ಟೀಕೆ

04:00 PM Feb 01, 2022 | Team Udayavani |

ಬೆಂಗಳೂರು: ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್ ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

Advertisement

‘ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಪ್ರಸಕ್ತ ಸಾಲಿನ ಕೇಂದ್ರ ಮುಂಗಡ ಪತ್ರದ ಬಗ್ಗೆ ಎಚ್ ಡಿಕೆ ಒಂದು ಸಾಲಿನಲ್ಲಿ ವ್ಯಾಖ್ಯಾನ ಮಾಡಿದರು.

ಸಾಮಾನ್ಯನ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ. ಕೋವಿಡ್, ಬೆಲೆ ಏರಿಕೆಯಿಂದ ಬಸವಳಿದ ಬಡಜನರ ಬಗ್ಗೆ ಕನಿಕರ ತೋರಿಲ್ಲ. ಕೋವಿಡ್ ಸಂಕಷ್ಟದ ನಂತರ ದೇಶದಲ್ಲಿ ಬಡತನಕ್ಕೆ ಹೆಚ್ಚು ಜನರು ದೂಡಲ್ಪಡುತ್ತಿದ್ದರೆ, ಸಿರಿವಂತರು ಮತ್ತಷ್ಟು ಸಿರಿವಂತರಾಗುತ್ತಿದ್ದಾರೆ. ಈ ಬಗ್ಗೆ ಬಜೆಟ್ ನಲ್ಲಿ ಸ್ಪಷ್ಟ ಪರಿಹಾರ ಇಲ್ಲ. ಸೋಂಕಿನ ಮಾರಿಗೆ ಸಿಲುಕಿ ಭರವಸೆ ಕಳೆದುಕೊಂಡಿರುವ ರೈತಾಪಿ, ಕಾರ್ಮಿಕರಿಗೆ ಧೈರ್ಯ ತುಂಬುವ ಅಥವಾ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಅಂಶಗಳು ಈ ಬಜೆಟ್ ನಲ್ಲಿ ಇರಲೇಬೇಕಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ:ಇನ್ನು ಮುಂದೆ ಎಲೆಕ್ಟ್ರಾನಿಕ್ ಚಿಪ್ ಒಳಗೊಂಡ ಇ-ಪಾಸ್ ಪೋರ್ಟ್ ವಿತರಣೆ: ಬಜೆಟ್ ನಲ್ಲಿ ಘೋಷಣೆ

ಬಜೆಟ್ ಬಗ್ಗೆ ದೊಡ್ಡಮಟ್ಟಿಗೆ ಹೇಳುವಂತಹದ್ದು ಏನೂ ಇಲ್ಲ. ಕೆಲವೊಮ್ಮೆ ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹೇಳುತ್ತಾರೆ. ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೋ ಎಂದು ಹೇಳಿದ್ದಾರೆ ಹಣಕಾಸು ಸಚಿವರು. ಬಜೆಟ್ ಬಗ್ಗೆ ಇನ್ನೂ ಸಂಪೂರ್ಣವಾಗಿ ಗಮನಿಸಿಲ್ಲ. ನದಿ ಯೋಜನೆ ಬಗ್ಗೆ ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕಾವೇರಿ – ಪೆನ್ನಾರ್, ಕೃಷ್ಣ-ಗೋದಾವರಿ ನದಿಗಳ ಜೋಡಣೆ ಬಗ್ಗೆ ಹೇಳಿದ್ದಾರೆ. ಅದು ಕಾರ್ಯರೂಪಕ್ಕೆ ಬರಬೇಕಲ್ಲ. ನದಿ ಜೋಡಣೆ ವಿಚಾರ ಬರಿ ಚರ್ಚೆಯಲ್ಲಿ. ಇದೆ ಕಾರ್ಯರೂಪಕ್ಕೆ ಬರಬೇಕಿದೆ. ಹೆಚ್ಚಿನ ತೆರಿಗೆ ವಿಧಿಸಿಲ್ಲ ಅನ್ನುವುದು ಬಿಟ್ಟರೇ ಬೇರೆ ಏನೂ ಇಲ್ಲ. ಯಾವುದೇ ಹೊಸ ರೀತಿಯ ಅಭಿವೃದ್ದಿ ಕಾರ್ಯಕ್ರಮವಿಲ್ಲ. ಈ ವರ್ಷವನ್ನು ಕಳೆಯುವ ಬಜೆಟ್ ಅಷ್ಟೇ ಇದು ಎಂದು ಅವರು ಟೀಕಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next