Advertisement

ಹೀಗೆ ಮಾಡಿದರೆ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣ ಸಾಧ್ಯ: ಸರ್ಕಾರಕ್ಕೆ ಎಚ್ ಡಿಕೆ ಸಲಹೆ

11:55 AM Jul 13, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಗಳನ್ನು ಮನೆಮನೆಗೆ ತಲುಪಿಸುವ ವ್ಯವಸ್ಥೆ ಮಾಡುವ ಮೂಲಕ ಕೋವಿಡ್ ನಿಯಂತ್ರಣ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೋವಿಡ್ ಸೋಂಕು ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದಿದ್ದಾರೆ.

ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಲ್ಲರಿಗೂ ಆರೋಗ್ಯ ಕಿಟ್ ನೀಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕನಿಷ್ಠ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಆರೋಗ್ಯ ಕಿಟ್ ನೀಡಲು ಸರ್ಕಾರ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕು. ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ ಎಂದು ಸರ್ಕಾರಕ್ಕೆ ಎಚ್ ಡಿಕೆ ಸಲಹೆ ನೀಡಿದ್ದಾರೆ.

ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೋವಿಡ್ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗಬೇಕು ಎಂದು ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next