Advertisement

ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ

12:53 PM Jan 18, 2021 | Team Udayavani |

ಬೆಂಗಳೂರು: ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಈ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಬೆಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

Advertisement

ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ. ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿಯ ಹೇಳಿಕೆ ಕೊಡಬಾರದು. ಇದು ಭಯೋತ್ಪಾಕ ಹೇಳಿಕೆ ಎನಿಸುತ್ತದೆ. ಈ ರೀತಿ ಕುಚೋದ್ಯದ ಹೇಳಿಕೆಗಳಿಗೆ ಪೂರ್ಣ ವಿರಾಮ ಹಾಕಬೇಕು ಎಂದು ಹೇಳಿದರು.

ಇದೇ ಕಾರಣಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಆರಂಭಿಸಲು ಶುರು ಮಾಡಿದ್ದೆ. ಬೆಳಗಾವಿಯಲ್ಲಿ ಡಬಲ್ ಎಂಜಿನ್ ಸರ್ಕಾರ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಅವರು ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಮಾತನಾಡಬೇಕಿತ್ತು. ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಹೇಳಿಕೆ ಖಂಡಿಸಬೇಕಿತ್ತು. ಅವರ ನಡೆ ಬಗ್ಗೆ ಅನುಮಾನ ಮೂಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು‌.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ

ಕಳೆದ 2008ರಲ್ಲಿ ದೇವೇಗೌಡರು ಹಾಗೂ ಮಕ್ಕಳನ್ನ ಮುಗಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು. ಬಳಿಕ ರಾಜಕಾರಣದಲ್ಲಿ ಏನಾಯ್ತು ಗೊತ್ತಿದೆಯಾ? ಮೂರು ಜನ ಮುಖ್ಯಮಂತ್ರಿಗಳು ಬದಲಾದರು. ಜೆಡಿಎಸ್‌ ನಿರ್ಣಾಮ ಮಾಡುತ್ತೇವೆ ಅಂತಾ ಹೇಳಿದ್ದೋರೆಲ್ಲ ಎಲ್ಲೆಲ್ಲೋ ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Advertisement

ನನ್ನ ಸುದ್ದಿಗೆ ಬಂದರೆ ಸರಿ ಇರೋದಿಲ್ಲ: ಜೆಡಿಎಸ್‌ ಪಕ್ಷದ ಸುದ್ದಿಗೆ ಬರಬೇಡಿ. ನನ್ನ‌ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬೇಡಿ. ನನ್ನ ಸುದ್ದಿಗೆ ಬಂದರೆ ಸರಿ ಇರೋದಿಲ್ಲ. ಅಧಿಕಾರದ ಮದದಿಂದ ಮಾತನಾಡಿದ್ದಾರೆ. ಮುಂದಿನ ಬಾರಿಯೂ ನಾವೇ ಅಂತಾ ಬೀಗುತ್ತಿದ್ದಾರೆ. ಈ ಹಿಂದೆ ಇದೇ ಯಡಿಯೂರಪ್ಪ ಹತ್ತು ವರ್ಷ ನಾವೇ ಅಧಿಕಾರದಲ್ಲಿ ಇರುತ್ತೇವೆ ಎಂದು ಹೇಳಿದ್ದರು. ಆಮೇಲೆ ಇವರು ಎಲ್ಲಿ ಹೋದರು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ

ನಾನು ವೈಯಕ್ತಿಕ ಸಿಡಿಗಳನ್ನು ಇಟ್ಕೊಂಡು ರಾಜಕಾರಣ ಮಾಡುವುದಿಲ್ಲ. ನಾನು ರಾಜಕೀಯವಾಗಿ ಬಳಸಿಕೊಳ್ಳುವ ದಾಖಲೆಗಳೇ ಬೇರೆ ಎಂದು ಪ್ರತಿಕ್ರಿಯಿಸಿದರು.

ಇದೂವರೆಗೂ ಮೌನವಾಗಿದ್ದೆ. ಜೆಡಿಎಸ್‌ ಮುಗಿಸಲು ಯಡಿಯೂರಪ್ಪ ಇನ್ನೊಂದು ಜನ್ಮ ಹುಟ್ಟಿಬಂದರೂ ಆಗುವುದಿಲ್ಲ. ಇದುವರೆಗೂ ನನ್ನ ಪಕ್ಷದ ತಂಟೆಗೆ ಬಂದಿಲ್ಲ. ಹಾಗಾಗಿ ಯಡಿಯೂರಪ್ಪ ಸುರಕ್ಷಿತವಾಗಿದ್ದಾರೆ. ನನ್ನ ತಂಟೆಗೆ ಬಂದರೆ ಹುಷಾರ್. ನಿಮ್ಮ ಬಂಡವಾಳ ನನ್ನ ಕೈಯಲ್ಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಹಿಂದೆ ಕಾಂಗ್ರೆಸ್ ನಾಯಕರೊಬ್ಬರು ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂದಿದ್ದರು. ಇದೀಗ ಆರ್ ಎಸ್ಎಸ್ ಮೂಲಗಳ ಪ್ರಕಾರ ಏಪ್ರಿಲ್ ಬಳಿಕ ಯಡಿಯೂರಪ್ಪ ಬದಲಾಗಲಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ ಅವರು ಆರ್ ಎಸ್ಎಸ್ ನ ಬಿ ಟೀಮ್ ಇರಬೇಕು ಎಂದು ಎಚ್. ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಹೆಸರು ಹೇಳದೆ ಕಿಡಿಕಾರಿದರು.

ಇದನ್ನೂ ಓದಿ: ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!

ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಿ.ಪಿ ಯೋಗೇಶ್ವರ್ ಒಂಬತ್ತು ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ನೀರಾವರಿ ಸಚಿವರು ಹೇಳಿದ್ದಾರೆ. ಮನೆ ಮಾರಿ ಸಾಲ ಮಾಡಿ ಖರ್ಚು ಮಾಡಿದ್ದಾರಂತೆ. ನನ್ನ ಅವಧಿಯಲ್ಲಿ ಐಟಿ ಅಧಿಕಾರಿಗಳು ದಿನ ಬೆಳಗಾದರೆ ದಾಳಿ ಮಾಡುತ್ತಿದ್ದರು.  ಈಗ ಇವರೆಲ್ಲಾ ಎಲ್ಲಿ ಹೋದರು. ಐಟಿ ಇಲಾಖೆಯವರಿಗೆ ಮಾನಮರ್ಯಾದೆ ಇದ್ದರೆ ಅವರ ವಿರುದ್ಧ ಕ್ರಮಕೈಗೊಳ್ಳಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next