Advertisement

ಬಡಾಯಿ ಸಹೋದರರ ಆಟದ ಅಂತ್ಯ ಕ್ಷಣ ಹತ್ತಿರವಾಗಿದೆ: ಡಿಕೆ ಬ್ರದರ್ಸ್ ವಿರುದ್ಧ ಎಚ್ ಡಿಕೆ ಕಿಡಿ

10:29 AM Jan 04, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಇಂದು ಮಾಜಿ ಸಿಎಂ ಎಚ್ ಡಿಕೆ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿದ್ದು, “ಸಹೋದರರ ಆಟದ ಅಂತ್ಯ ಹತ್ತಿರ ಬಂದಿದೆ” ಎಂದಿದ್ದಾರೆ.

Advertisement

“ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ” ಎಂದು ಎಚ್ ಡಿಕೆ ಕುಟುಕಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:ಬುಲ್ಲಿ ಬಾಯ್ ಆ್ಯಪ್ ಪ್ರಕರಣ:ಮುಂಬೈ ಪೊಲೀಸರಿಂದ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಎಚ್ ಡಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next