Advertisement

ಜೆಡಿಎಸ್‌ ಜತೆ ಮೈತ್ರಿಗೆ ಯಾರ ವಿರೋಧವಿಲ್ಲ

06:20 AM Jul 24, 2018 | Team Udayavani |

ಬೆಂಗಳೂರು: ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲಾಗುವುದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Advertisement

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ದೆಹಲಿಯಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಜೆಡಿಎಸ್‌ಗೆ ಎಷ್ಟು ಸ್ಥಾನ ಬಿಟ್ಟು ಕೊಡಬೇಕೆಂಬ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್‌- 20, ಜೆಡಿಎಸ್‌ -8 ಸ್ಥಾನ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ ಎಂದು ಹೇಳಿದರು. ಇದೇ ವೇಳೆ, ಸಂಪುಟ ವಿಸ್ತರಣೆಗೆ ರಾಹುಲ್‌ ಗಾಂಧಿ ಒಪ್ಪಿಗೆ ನೀಡಿದ್ದಾರೆ. ಆಷಾಢ ಮಾಸ ಕಳೆದ ನಂತರ ನಿಗಮ ಮಂಡಳಿ ಹಾಗೂ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next