Advertisement

ಎರಡನೇ ಡೋಸ್ ಲಸಿಕೆ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

01:01 PM Apr 29, 2021 | Team Udayavani |

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

Advertisement

ಸಿದ್ದರಾಮಯ್ಯನವರು ಮಾರ್ಚ್ 15 ರಂದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಕೋವಿಡ್ ಲಸಿಕೆಯ ಮೊದಲ ಡೋಸ್‌ ಪಡೆದುಕೊಂಡಿದ್ದರು. ಇದಾದ ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಎರಡನೇ ಡೋಸ್ ಲಸಿಕೆ  ಪಡೆದುಕೊಂಡರು.

ಸಿದ್ದರಾಮಯ್ಯ ಅವರಿಗೂ ಕೋವಿಡ್‌ ಸೋಂಕು ಪಾಸಿಟಿವ್‌ ಆಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದಾದ ಬಳಿಕ ಸಾಕಷ್ಟು ಎಚ್ಚರಿಕೆಯನ್ನು ವಹಿಸಿಕೊಂಡಿದ್ದರು.

ಇನ್ನು ದೇಶದಲ್ಲಿ ಕೋವಿಡ್ ವಿರುದ್ಧ ಹೋರಾಟ ತೀವ್ರಗೊಳಿಸುವ ನಿಟ್ಟನಿಲ್ಲಿ ಲಸಿಕಾ ಅಭಿಯಾನ ಚುರುಕುಗೊಳಿಸಲಾಗಿದೆ. ಈಗಾಗಲೇ ಎರಡು ಹಂತಗಳಲ್ಲಿ ಕೋವಿಡ್ ಲಸಿಕೆ ನೀಡಲಾಗಿದೆ. ಇದೀಗ ಮೂರನೇ ಹಂತದಲ್ಲಿ ಲಸಿಕಾ ಅಭಿಯಾನ ಮೇ 1 ರಿಂದ ಶುರುವಾಗಲಿದೆ. 18 ವರ್ಷ ಮೇಲ್ಪಟ್ಟವರಿಗೂ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟನಿಲ್ಲಿ ಬುಧವಾರ 4 ಗಂಟೆಯಿಂದ ನೋಂದಣಿ ಕಾರ್ಯ ಆರಂಭಗೊಂಡಿದ್ದು ಸುಮಾರು 70 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next