Advertisement

ಉಸಿರಾಟದ ಸಮಸ್ಯೆ; ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ

12:34 PM Sep 25, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶದ ಸೋಂಕಿನ ಕಾರಣದಿಂದ ಅವರನ್ನು ಶನಿವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಎಸ್.ಎಂ ಕೃಷ್ಣ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಅವರ ಆರೋಗ್ಯ ಪರಿಸ್ಥಿತಿ ಸದ್ಯ ಸುಧಾರಣೆ ಕಂಡಿದೆ ಎಂದು ಮೂಲಗಳು ತಿಳಿಸಿವೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ನಿಗಾ ವಹಿಸಿದ್ದಾರೆ.

ಶನಿವಾರ ರಾತ್ರಿ ಜ್ವರ ಕಾಣಿಸಿಕೊಂಡ ಕಾರಣ ಎಸ್.ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನಿಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಇದನ್ನೂ ಓದಿ:ಚಂಡೀಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು: ಪ್ರಧಾನಿ ಮೋದಿ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next