ನವದೆಹಲಿ: ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸೇರಿದಂತೆ ಆರು ಮಂದಿ ಕನ್ನಡಿಗರಿಗೆ ಬುಧವಾರ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು. ಉದ್ಯಮಿ ಕುಮಾರಮಂಗಳಂ ಬಿರ್ಲಾ ಅವರಿಗೆ ಪದ್ಮ ವಿಭೂಷಣ ಗೌರವ ಪ್ರದಾನ ಮಾಡಲಾಯಿತು.
ರಾಜ್ಯದಿಂದ ಪದ್ಮಶ್ರೀ ಪುರಸ್ಕೃತರಾದ ಖ್ಯಾತ ತಮಟೆ ಕಲಾವಿದ ಚಿಕ್ಕಬಳ್ಳಾಪುರದ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಪುರಾತತ್ವ ಶಾಸ್ತ್ರಜ್ಞ ಎಸ್.ಸುಬ್ಬರಾಮನ್, ಡಾ. ಖಾದರ್ ವಲ್ಲಿ ದುಡೆ ಕುಲ್ಲ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ಬೀದರ್ನ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ,ರಾಷ್ಟ್ರಪತಿಗಳಿಂದ ಗೌರವ ಸ್ವೀಕರಿಸಿದರು. ಹಿರಿಯ ಸಾಹಿತಿ ಎಲ್.ಎಲ್.ಭೈರಪ್ಪ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸೇರಿದಂತೆ ಉಳಿದವರಿಗೆ ಮುಂದಿನ ಹಂತದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.