Advertisement

ಬಿಜೆಪಿ ವಿರುದ್ಧ ಮಾಜಿ ಸಿಎಂ ಟ್ವೀಟ್‌ ದಾಳಿ

06:05 AM Nov 17, 2018 | Team Udayavani |

ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯದಲ್ಲಿ ಮನೆ ಮಾಡಿದರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನತೆ ಬೆಂಬಲ ನೀಡುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Advertisement

ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿರುವ ಅವರು, “ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಮೇಲಿಂದ ಮೇಲೆ ಕರಾವಳಿಗೆ ಭೇಟಿ ನೀಡುತ್ತಿದ್ದಾರೆ.

ಅವರು ರಾಜ್ಯದಲ್ಲಿಯೇ ಮನೆ ಮಾಡಿದರೂ ರಾಜ್ಯದ ಜನತೆ ಬಿಜೆಪಿ ಬೆಂಬಲಿಸುವುದಿಲ್ಲ’ ಎಂದು ಹೇಳಿದ್ದಾರೆ. ಬಿಜೆಪಿಗೆ ಅಯೋಧ್ಯೆಯ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಹ ರಾಮಮಂದಿರ ನಿರ್ಮಾಣ ಮಾಡುವುದಲ್ಲ. ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ರಾಮ ಜನ್ಮ ಭೂಮಿ ವಿವಾದ ಮತ್ತೆ ಜೀವ ಪಡೆದಿರುವುದು ಬಿಜೆಪಿ ಜನರನ್ನು ಭಾವನಾತ್ಮಕವಾಗಿ ತಮ್ಮತ್ತ ಹಿಡಿದಿಡುವ ಪ್ರಯತ್ನದ ಒಂದು ಭಾಗವಷ್ಟೇ. ಇದು ಜನತೆಗೂ ಗೊತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಮತ್ತೂಂದು ಟ್ವೀಟ್‌ನಲ್ಲಿ ನಾನು ರಾಜಕೀಯದಲ್ಲಿರುವವರೆಗೂ ಅಹಿಂದ ವರ್ಗದ ಹಿತ ರಕ್ಷಣೆಗೆ ಬದಟಛಿನಿದ್ದೇನೆ. ಅಹಿಂದ ಒಂದು ಸಂಘಟನೆಯಷ್ಟೇ ಅಲ್ಲ. ಅದೊಂದು ಚಳವಳಿ. ಅವರ ಬೇಡಿಕೆಗಳು ಪೂರ್ಣವಾಗಿ ಈಡೇರುವವರೆಗೂ ಚಳವಳಿ ನಿರಂತರವಾಗಿರುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲ ಕೂಡ ಇದೆ. ಈಗಲೂ ನಾನು ಅಹಿಂದ ವರ್ಗದ ಧ್ವನಿಯಾಗಿದ್ದೇನೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next