Advertisement

Dharmasthala: ಮಾಜಿ ಸಿಎಂ ಯಡಿಯೂರಪ್ಪ ಧರ್ಮಸ್ಥಳ ಭೇಟಿ

12:37 PM Jun 24, 2024 | Team Udayavani |

ಬೆಳ್ತಂಗಡಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

Advertisement

ಜೂ.23ರಂದು ಧರ್ಮಸ್ಥಳಕ್ಕೆ ಆಗಮಿಸಿದ ಅವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದಿದ್ದಾರೆ. ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಸ್ನೇಹಿತರ ಜೊತೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮೂರಲ್ಲಿ ಬರಗಾಲ, ಊರಲ್ಲಿ ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ. ವೀರೇಂದ್ರ ಹೆಗ್ಗಡೆಯವರ ಜೊತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಸೇರಿದಂತೆ ಇನ್ನು ಅನೇಕರು ಜೊತೆಯಲ್ಲಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next