Advertisement

ಪಕ್ಷೇತರನಾಗಿ ಗೆದ್ದರೆ ಬಿಜೆಪಿಗೇ ಬೆಂಬಲ : ಗೋವಾ ಮಾಜಿ ಕಾಂಗ್ರೆಸ್ ಶಾಸಕ ಅಲೆಕ್ಸ್

05:27 PM Feb 23, 2022 | Team Udayavani |

ಪಣಜಿ: ಕಠಿಣ ಪರಿಸ್ಥಿತಿಯಲ್ಲೂ ನನ್ನ ಕ್ಷೇತ್ರದ ಜನರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಈಗ ನಾನು ಪ್ರಸಕ್ತ ಚುನಾವಣೆಯಲ್ಲಿ ಜಯಗಳಿಸಿದರೆ ಅವರ ಕೆಲಸ ಮಾಡಿಕೊಡುವುದು ಒಂದೇ ನನ್ನ ಗುರಿಯಾಗಿದ್ದು , ಅದಕ್ಕಾಗಿ ಅಗತ್ಯಬಿದ್ದರೆ ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಕುಡ್ತರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಪಕ್ಷೇತರ ಅಭ್ಯರ್ಥಿ ಅಲೆಕ್ಸ್ ರೆಜಿನಾಲ್ಡ್ ಲಾರೆನ್ಸ್ ಹೇಳಿಕೆ ನೀಡಿದ್ದಾರೆ.

Advertisement

ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆಯಿದೆ ಎಂಬ ಮಾತುಗಳು, ಯಾವ ಪಕ್ಷವು ಬಿಜೆಪಿಯನ್ನು ಬೆಂಬಲಿಸಲಿದೆ ಎನ್ನುವ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಗೆಲುವು ಸಾಧಿಸಿದರೆ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿದಿರುವ ರೆಜಿನಾಲ್ಡ್ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನನ್ನ ಕ್ಷೇತ್ರದ ಕೆಲಸ ಮಾಡಲು ಬಿಜೆಪಿ ಬಳಿ ಹೋಗುತ್ತಿದ್ದೆ. ಆ ಸಂದರ್ಭದಲ್ಲಿ ನನ್ನನ್ನು ತೀವ್ರವಾಗಿ ಟೀಕಿಸಲಾಯಿತು. ಆದರೆ ನಾನು ಈ ಬಾರಿ ಜಯಗಳಿಸಿದರೆ ನಾನು ಸ್ವತಂತ್ರನಾಗಿರುತ್ತೇನೆ ಆದ್ದರಿಂದ ನನ್ನ ಮೇಲೆ ಯಾವುದೇ ನಿರ್ಬಂಧಗಳಿರುವುದಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next