Advertisement

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ: ಮಾಜಿ ಕಾರ್ಪೋರೇಟರ್ ಜಾಕೀರ್ ಸಿಸಿಬಿ ಬಲೆಗೆ

08:48 AM Dec 03, 2020 | keerthan |

ಬೆಂಗಳೂರು: ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಆಗಸ್ಟ್ ನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಜಾಕೀರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವಾರಗಳ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:ವರ್ತೂರು ಪ್ರಕಾಶ್‌ ಅಪಹರಣದಲ್ಲಿ ಖಾಸಗಿ ಹೈಡ್ರಾಮಾ; ಮಹಿಳೆ ವಿಚಾರಕ್ಕೆ ನಡೆಯಿತಾ ಕಿಡ್ನಾಪ್?

ಆಗಸ್ಟ್ 11 ರಂದು ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತು ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆದಿತ್ತು. ದುಷ್ಕರ್ಮಿಗಳು ಬೆಂಕಿ ಹಚ್ಚಿದ ಕಾರಣದಿಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸುಟ್ಟು ಹೋಗಿತ್ತು.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಚಾರ್ಜ್ ಶೀಟ್ ಹಾಕುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಕೂಡಾ ಸಿಸಿಬಿ ಪೊಲೀಸರು ಕೆಲದಿನಗಳ ಹಿಂದೆ ಬಂಧಿಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಜಾಕೀರ್ ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next