Advertisement

ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

04:39 PM Apr 22, 2023 | Team Udayavani |

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಕೂಡ 40 ಮಂದಿ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಪ್ರಕಟಿಸಿದೆ.

Advertisement

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್‌ ಸಿಂಗ್‌ ಮಾನ್‌, ಮಾಜಿ ಖ್ಯಾತ ಕ್ರಿಕೆಟಿಗ, ರಾಜ್ಯಸಭಾ ಸದಸ್ಯ ಹರ್ಭಜನ್‌ ಸಿಂಗ್‌, ರಾಜ್ಯಸಭಾ ಸದಸ್ಯ ರಘವ್‌ ಚೆಡ್ಡಾ, ಸಂಜಯ್‌ ಸಿಂಗ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಜತೆಗೆ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಹಾಸ್ಯ ನಟ ಟೆನ್ನಿಸ್‌ ಕೃಷ್ಣ ಕೂಡ ಸ್ಟಾರ್‌ ಪ್ರಚಾರಕ ಪಟ್ಟಿಯಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next