ನವದೆಹಲಿ : ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಆಡಳಿತಾರೂಢ ಬಿಜೆಪಿಯ ಇಬ್ಬರು ಹಿರಿಯ ನಾಯಕರು ಮುಂಬರುವ ಬುಧವಾರ (ನ 9) ಘೋಷಿಸಿದ್ದಾರೆ.
“ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ” ಎಂದು ಮಾಜಿ ಸಿಎಂ ವಿಜಯ್ ರೂಪಾನಿ ಹೇಳಿದ್ದಾರೆ. ಆಗಸ್ಟ್ 2016 ರಿಂದ ಸೆಪ್ಟೆಂಬರ್ 2021 ರವರೆಗೆ ಮುಖ್ಯಮಂತ್ರಿಯಾಗಿದ್ದ ಹಾಲಿ ಶಾಸಕ ರೂಪಾನಿ ರಾಜ್‌ಕೋಟ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಪಟೇಲ್ ಅವರು ಗುಜರಾತ್ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರಿಗೆ ಕೈಬರಹದ ಪತ್ರ ಬರೆದಿದ್ದು, ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರುವ ಕಾರಣ ತಮ್ಮ ಪ್ರಸ್ತುತ ವಿಧಾನಸಭಾ ಕ್ಷೇತ್ರವಾದ ಮೆಹ್ಸಾನಾದಿಂದ ಟಿಕೆಟ್‌ಗೆ ಪರಿಗಣಿಸಬಾರದು ಎಂದು ಹೇಳಿದ್ದಾರೆ.
ರೂಪಾನಿ ಸಂಪುಟದಲ್ಲಿ ಸಚಿವರಾಗಿದ್ದ ಇನ್ನು ಇಬ್ಬರು ಹಿರಿಯ ಬಿಜೆಪಿ ನಾಯಕರಾದ ಹಾಲಿ ಶಾಸಕರು ಭೂಪೇಂದ್ರಸಿನ್ಹ್ ಚುಡಾಸಮ ಮತ್ತು ಪ್ರದೀಪ್ಸಿನ್ಹ್ ಜಡೇಜಾ ಮುಂದಿನ ತಿಂಗಳ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
182 ಸದಸ್ಯರ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.