Advertisement

ರಾಮನಗರ ಲಾಕ್‌ಡೌನ್‌ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ

11:56 PM Jul 12, 2020 | Hari Prasad |

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಂತೇ ಇರುವ ರಾಮನಗರ ಜಿಲ್ಲೆಯನ್ನೂ ಲಾಕ್‌ಡೌನ್‌ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Advertisement

ಕಂದಾಯ ಸಚಿವ ಆರ್‌.ಅಶೋಕ್‌, ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಭಾನುವಾರ ಸಮಾಲೋಚನೆ ನಡೆಸಿದ ಎಚ್‌ಡಿಕೆ ಲಾಕ್‌ಡೌನ್‌ನ ಅಗತ್ಯತೆಯನ್ನು ವಿವರಿಸಿದ್ದಾರೆ.

‘ಬೆಂಗಳೂರಿನೊಂದಿಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲಾಗಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲೂಕುಗಳಿಗಿಂತಲೂ ಬೆಂಗಳೂರಿಗೆ ಹೆಚ್ಚು ಹತ್ತಿರದಲ್ಲಿದೆ.

ಹಾಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಂತಲೂ ಅಧಿಕ ಸೋಂಕಿನ ಪ್ರಕರಣಗಳನ್ನು ಹೊಂದಿರುವ ರಾಮನಗರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲೇಬೇಕಾದ ಅಗತ್ಯತೆಯನ್ನು ಎಚ್‌ಡಿಕೆ ಈ ಸಂದರ್ಭದಲ್ಲಿ ಅವರಿಗೆ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next