Advertisement

ನ್ಯಾಯಾಧೀಶರುಗಳ ಪತ್ನಿಯರ ವಿರುದ್ಧ ಅಶ್ಲೀಲ ಹೇಳಿಕೆ; ನಿವೃತ್ತ ಜಡ್ಜ್ ಕರ್ಣನ್ ಬಂಧನ

04:40 PM Dec 02, 2020 | Nagendra Trasi |

ನವದೆಹಲಿ: ಮಹಿಳಾ ನ್ಯಾಯಾಧೀಶರು ಹಾಗೂ ನ್ಯಾಯಾಧೀಶರ ಪತ್ನಿಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿರುವ ಆರೋಪದಲ್ಲಿ ಹೈಕೋರ್ಟ್ ಮಾಜಿ ನ್ಯಾಯಾಧೀಶ ಸಿಎಸ್ ಕರ್ಣನ್ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಬುಧವಾರ(ಡಿಸೆಂಬರ್ 2, 2020) ನಡೆದಿದೆ.

Advertisement

ಸಿಎಸ್ ಕರ್ಣನ್ ಹೇಳಿಕೆ ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಬಯಲಾಗಿರುವುದಾಗಿ ವರದಿ ತಿಳಿಸಿದೆ. ಅಶ್ಲೀಲ ಹೇಳಿಕೆ ನೀಡಿರುವ ಕರ್ಣನ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಮಾಜಿ ಜಡ್ಜ್ ಸಿಎಸ್ ಕರ್ಣನ್ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರುಗಳ ಪತ್ನಿಯರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿ ಅದನ್ನು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿ:ಹಿರಿಯ ವಿದ್ವಾಂಸ ಡಾ ಬನ್ನಂಜೆ ಗೋವಿಂದಾಚಾರ್ಯರಿಗೆ ಪುತ್ರ ವಿಯೋಗ

ವಿವಾದಿತ ನಿವೃತ್ತ ಜಡ್ಜ್:

Advertisement

ನ್ಯಾಯಾಂಗ ನಿಂದನೆ ಆರೋಪದಲ್ಲಿ ಕೋಲ್ಕತಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಸಿಎಸ್ ಕರ್ಣನ್ ಅವರು ಬಂಧನಕ್ಕೊಳಗಾಗಿದ್ದರು. ಅಂದು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್  ಗೆ ಸುಪ್ರೀಂಕೋರ್ಟ್ ಆರು ತಿಂಗಳ ಶಿಕ್ಷೆ ವಿಧಿಸಿತ್ತು. ಈ ಪ್ರಕರಣದಲ್ಲಿ ಕರ್ಣನ್ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ್ದರು. ಆದರೆ ಅರ್ಜಿಯನ್ನು ತಿರಸ್ಕರಿಸಿದ್ದ ಸುಪ್ರೀಂ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ, ಜೈಲುಶಿಕ್ಷೆಗೆ ಗುರಿಯಾಗಲೇಬೇಕು ಎಂದು ತೀರ್ಪು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next