Advertisement

K.Shivaram; ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ಇನ್ನಿಲ್ಲ

03:52 PM Feb 29, 2024 | Team Udayavani |

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಕೆ.ಶಿವರಾಂ ಅವರು ಗುರುವಾರ ಅಸುನೀಗಿದ್ದಾರೆ ಎಂದು ವರದಿಯಾಗಿದೆ. ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ ಶಿವರಾಂ, ಕಳೆದೊಂದು ದಶಕದಲ್ಲಿ ರಾಜಕೀಯ ರಂಗಕ್ಕೆ ಸೇರಿದ್ದರು.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಂ, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಂ ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ಅವರು ಮಿಂಚಿದ್ದರು.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದಿದ್ದ ಶಿವರಾಂ ರಾಜಕೀಯ ಜೀವನ ಆರಂಭಿಸಿದ್ದರು. ಕಾಂಗ್ರೆಸ್ ಸೇರಿದ್ದ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next